ಶಿವಮೊಗ್ಗ: ಇಂದು ಉಡುಪಿಯಲ್ಲಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪನವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು. ಅಲ್ಲದೇ ಕೂಡಲೇ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿ ಎನ್ಎಸ್ಯುಐ ಕಾರ್ಯಕರ್ತರು ಸಚಿವ ಈಶ್ವರಪ್ಪ ಕಚೇರಿ ಮುತ್ತಿಗೆ ಹಾಕಲು ಯತ್ನಿಸಿದರು.
ಈ ವೇಳೆ ಕಾರ್ಯಕರ್ತರನ್ನು ಪೊಲೀಸರು ತಡೆದರು. ಶಿವಪ್ಪನಾಯಕನ ವೃತ್ತದಿಂದ ಸಚಿವರ ಕಚೇರಿವರೆಗೂ ಕಾರ್ಯಕರ್ತರು ಪಂಜಿನ ಮೆರವಣಿಗೆಯಲ್ಲಿ ಬಂದರು. ಈಶ್ವರಪ್ಪನವರನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿದರು.
ನಂತರ ಮಾತನಾಡಿದ ಮಾಜಿ ವಿಧಾನಪರಿಷತ್ ಸದಸ್ಯ ಆರ್.ಪ್ರಸನ್ನ ಕುಮಾರ್, ಸಚಿವ ಈಶ್ವರಪ್ಪ ಅವರನ್ನು ಮುಖ್ಯಮಂತ್ರಿಗಳು ಕೂಡಲೇ ವಜಾಗೊಳಿಸಬೇಕು ಎಂದರು. ಈ ಸಂದರ್ಭದಲ್ಲಿ ಮುಖಂಡರಾದ ರಮೇಶ್ ಹೆಗ್ಡೆ, ಮಂಜುನಾಥ, ಚೇತನ್, ಕಲ್ಗೋಡು ರತ್ನಾಕರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಇದನ್ನೂ ಓದಿ: ಸಂತೋಷ್ ಡೆತ್ ನೋಟ್ ಬಗ್ಗೆ ಈಶ್ವರಪ್ಪ ಹೇಳಿದ್ದೇನು : ಸಚಿವರ ವಿಶೇಷ ಸಂದರ್ಶನ