ETV Bharat / state

ಬಾಲಕಿ ಮೇಲೆ ಅತ್ಯಾಚಾರ; ಪೋಕ್ಸೊ ಕಾಯಿದೆಯಡಿ ವೃದ್ಧನ ಬಂಧನ - old man arrested

ವೃದ್ಧನೊಬ್ಬ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದು, ಆತನನ್ನು ಹೊಳೆಹೊನ್ನೂರು ಠಾಣೆಯ ಪೊಲೀಸರು ಬಂಧಿಸಿದ್ದಾರೆ.

posco case
ಬಾಲಕಿ ಮೇಲೆ ಅತ್ಯಾಚಾರ
author img

By ETV Bharat Karnataka Team

Published : Nov 23, 2023, 9:53 PM IST

ಶಿವಮೊಗ್ಗ: 76 ವರ್ಷದ ವೃದ್ಧನೊಬ್ಬನು ಬಾಲಕಿಯ (10) ಮೇಲೆ ಅತ್ಯಾಚಾರ ಎಸಗಿರುವ ಕುರಿತು ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯಿದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

ವೃದ್ಧನು ಬಾಲಕಿಗೆ ಚಾಕೊಲೇಟ್ ಕೊಡಿಸುವುದಾಗಿ ನಂಬಿಸಿ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ ಎಂದು ಬಾಲಕಿಯ ಪೋಷಕರು ಪೊಲೀಸ​ರಿಗೆ ದೂರು ನೀಡಿದ್ದರು. ಪೋಕ್ಸೊ ಕಾಯಿದೆಯಡಿ ದೂರು ದಾಖಲಿಸಿಕೊಂಡ ಪೊಲೀಸರು ಅತ್ಯಾಚಾರದ ಆರೋಪದಡಿ ವೃದ್ಧನನ್ನು ಬಂಧಿಸಿ, ತನಿಖೆ ಮುಂದುವರಿಸಿದ್ದಾರೆ.

ಚಾಕೊಲೇಟ್ ಆಸೆ ತೋರಿಸಿ ಬಾಲಕಿ ಕರೆದೊಯ್ದ ವೃದ್ಧ: ಚಾಕೊಲೇಟ್ ಕೊಡಿಸುವುದಾಗಿ ಹೇಳಿ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ. ಬಾಲಕಿ ಮನೆಗೆ ಬಂದು ಪೋಷಕರ ಎದುರು ಹೊಟ್ಟೆ, ಖಾಸಗಿ ಅಂಗದಲ್ಲಿ ನೋವು ಆಗುತ್ತಿದೆ ಎಂದು ತಿಳಿಸಿದ್ದಾಳೆ. ಪೋಷಕರು ಬಾಲಕಿಯನ್ನು ಸಮಾಧಾನದಿಂದ ಕೇಳಿದಾಗ ಬಾಲಕಿ ವೃದ್ಧನು ಹೇಯ ಕೃತ್ಯವೆಸಗಿರುವುದನ್ನು ಹೇಳಿದ್ದಾಳೆ. ನಂತರ ಪೋಷಕರು ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ದೂರ ನೀಡಿದ್ದಾರೆ.

ಪ್ರತ್ಯೇಕ ಪ್ರಕರಣ ಅಪ್ರಾಪ್ತೆ ಮೇಲೆ ಅತ್ಯಾಚಾರ, ಆರೋಪಿಗೆ 20 ವರ್ಷ ಜೈಲು ಶಿಕ್ಷೆ; ಇತ್ತೀಚೆಗೆ ಅಪ್ರಾಪ್ತೆಯ ಮೇಲೆ ಅತ್ಯಾಚಾರಗೈದ ಆರೋಪ ಸಾಬೀತಾದ ಪ್ರಕರಣದಲ್ಲಿ ವ್ಯಕ್ತಿಯೊಬ್ಬನಿಗೆ ದಾವಣಗೆರೆ ಜಿಲ್ಲಾ ಮತ್ತು ಸತ್ರ (ಎಫ್.ಟಿ.ಎಸ್.ಸಿ-1) ನ್ಯಾಯಾಲಯವು 17 ಸಾವಿರ ರೂಪಾಯಿ ದಂಡಸಹಿತ 20 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು.

ಹರಿಹರ ತಾಲೂಕಿನ ವ್ಯಕ್ತಿ, ಬಾಲಕಿಯನ್ನು ಪುಸಲಾಯಿಸಿ ಬಸ್ಸಿನಲ್ಲಿ ಬಲವಂತವಾಗಿ ನೆರೆ ಗ್ರಾಮದಲ್ಲಿರುವ ಸಂಬಂಧಿಕರ ಮನೆಗೆ ಕರೆದೊಯ್ದು ದುಷ್ಕೃತ್ಯ ಎಸಗಿದ್ದ. ಹರಿಹರ ಗ್ರಾಮಾಂತರ ಪೊಲೀಸ್​ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ವಿಮಾನದಲ್ಲಿ ಮಹಿಳೆಯೊಂದಿಗೆ ಅಸಭ್ಯ ವರ್ತನೆ: ಆರೋಪಿ ಬಂಧನ

ಜೈಪುರದಿಂದ ಬೆಂಗಳೂರಿಗೆ ಬರುತ್ತಿದ್ದ ಇಂಡಿಗೋ ವಿಮಾನದಲ್ಲಿ ಮದ್ಯಪಾನ ಮಾಡಿದ್ದ ವ್ಯಕ್ತಿಯೊಬ್ಬ ಮಹಿಳೆಯ ಕೈ ಹಿಡಿದು ಅಸಭ್ಯವಾಗಿ ವರ್ತಿಸಿರುವ ಘಟನೆ ಇತ್ತೀಚಗೆ ನಡೆದಿತ್ತು. ಆರೋಪಿ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ ಎಂದು ದೇವನಹಳ್ಳಿ ಪೊಲೀಸರು ತಿಳಿಸಿದ್ದರು.

ನವೆಂಬರ್ 17ರಂದು ಇಂಡಿಗೋ ಏರ್‌ಲೈನ್ಸ್​ನ 6E556 ವಿಮಾನವು ಜೈಪುರದಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರುವಾಗ ಘಟನೆ ನಡೆದಿತ್ತು. 27ಡಿ ಸಂಖ್ಯೆಯ ಸೀಟ್​ನಲ್ಲಿ ಕುಳಿತಿದ್ದ ರಣಧೀರ್ ಸಿಂಗ್ ಎಂಬಾತ ಮಹಿಳಾ ಪ್ರಯಾಣಿಕರೊಂದಿಗೆ ಅಸಭ್ಯವಾಗಿ ವರ್ತಿಸಿದ್ದ. ಮಹಿಳಾ ಸಹ ಪ್ರಯಾಣಿಕರ ಕೈ ಹಿಡಿದು ಅವಾಚ್ಯ ಪದಗಳಿಂದ ನಿಂದಿಸುತ್ತಿದ್ದ ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದರು.

ಸಂತ್ರಸ್ತ ಮಹಿಳೆ ಆರೋಪಿ ವಿರುದ್ಧ ಐಪಿಸಿ ಕಲಂ 354 ಎ (ಲೈಂಗಿಕ ಕಿರುಕುಳ) ಕಾಯ್ದೆಯಡಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ.

ಇದನ್ನೂಓದಿ:ಹಾಸನ: ಕುರಿಗಾಹಿ ಮಹಿಳೆಯ ಹತ್ಯೆ, ಹಳ್ಳದಲ್ಲಿ ಶವ ಪತ್ತೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.