ಶಿವಮೊಗ್ಗ: ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ರಾಜ ಕಾಲುವೆಗಳಲ್ಲಿ ತುಂಬಿರುವ ಹೂಳನ್ನು ತೆಗೆಯುವ ಮೂಲಕ ಮಳೆಗಾಲದಲ್ಲಿ ಉಂಟಾಗುವ ಅನಾಹುತ ಹಾಗೂ ಸಾಂಕ್ರಾಮಿಕ ರೋಗಗಳು ಹರಡುವುದನ್ನು ತಡೆಗಟ್ಟಬೇಕು ಎಂದು ಒತ್ತಾಯಿಸಿ ಅಣ್ಣಾ ಹಜಾರೆ ಹೋರಾಟ ಸಮಿತಿ ವತಿಯಿಂದ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.
ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಬರುವ ರಾಜಕಾಲುವೆಗಳಲ್ಲಿ ತುಂಬಿರುವ ಹೂಳನ್ನು ಪಾಲಿಕೆ ಕೂಡಲೇ ಸ್ವಚ್ಛಗೊಳಿಸಿ ನೀರು ಸರಾಗವಾಗಿ ಹರಿಯುವಂತೆ ಮಾಡಬೇಕು. ಇನ್ನು ಕೆಲವೇ ದಿನಗಳಲ್ಲಿ ಮಳೆ ಪ್ರಾರಂಭ ವಾಗುವುದರಿಂದ ರಾಜಕಾಲುವೆ ಪಕ್ಕದಲ್ಲಿ ಇರುವ ಮನೆಗಳಿಗೆ ಇದರಿಂದ ತೊಂದರೆಯಾಗುತ್ತದೆ. ಹಾಗಾಗಿ ಪಾಲಿಕೆ ಕೂಡಲೇ ಈ ಬಗ್ಗೆ ಗಮನ ಹರಿಸಿ ರಾಜಕಾಲುವೆಯ ಹೂಳು ತೆಗೆಸಬೇಕು. ಇಲ್ಲವಾದರೆ ಮಳೆಗಾಲದಲ್ಲಿ ಆಗುವ ಅನಾಹುತಗಳಿಗೆ ಪಾಲಿಕೆಯೇ ಜವಾಬ್ದಾರಿ ಎಂದು ಆಯುಕ್ತರಿಗೆ ಮನವಿ ಸಲ್ಲಿಸಲಾಗಿದೆ.