ETV Bharat / state

ಶಿವಮೊಗ್ಗ ಜಿಲ್ಲೆಯ ಮೂರು ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿಗಳ ಹೆಸರು ಘೋಷಣೆ.. ವಿಜಯೇಂದ್ರ ವಿರುದ್ಧ ಮಾಲತೇಶ್​ ಕಣಕ್ಕೆ - HC Yogesh

ಕಾಂಗ್ರೆಸ್​ನಿಂದ ಶಿವಮೊಗ್ಗ ಜಿಲ್ಲೆಯ ಮೂರು ಕ್ಷೇತ್ರದ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಲಾಗಿದೆ.

Etv Bharat
ಶಿವಮೊಗ್ಗ ಜಿಲ್ಲೆಯ ಮೂರು ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿಗಳ ಹೆಸರು ಘೋಷಣೆ
author img

By

Published : Apr 15, 2023, 4:08 PM IST

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಉಳಿದ ಮೂರು ವಿಧಾನಸಭೆ ಕ್ಷೇತ್ರಗಳ ಅಭ್ಯರ್ಥಿಯನ್ನು ಕೆಪಿಸಿಸಿ ಪ್ರಕಟ ಮಾಡಿದೆ. ಶಿವಮೊಗ್ಗ ಗ್ರಾಮಾಂತರ ಮೀಸಲು ಕ್ಷೇತ್ರದ ಅಭ್ಯರ್ಥಿಯಾಗಿ ಶ್ರೀನಿವಾಸ ಕರಿಯಣ್ಣ ಅವರ ಹೆಸರನ್ನು ಘೋಷಿಸಲಾಗಿದೆ. 2018ರ ಚುನಾವಣೆಯಲ್ಲಿ ಶ್ರೀನಿವಾಸ ಕರಿಯಣ್ಣ ಅವರು ಸ್ಪರ್ಧೆ ಮಾಡಿದ್ದರು. ಇವರು ಅಂದಿನ ಚುನಾವಣೆಯಲ್ಲಿ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದರು. ಈ ಬಾರಿಯ ಚುನಾವಣೆಯಲ್ಲಿ ತೀವ್ರ ಪೈಪೋಟಿಯ‌ ನಡುವೆ ಟಿಕೆಟ್ ಪಡೆದು ಕೊಂಡಿದ್ದಾರೆ. ಇವರು ಮಾಜಿ ಶಾಸಕ ಕರಿಯಣ್ಣನವರ ಪುತ್ರರಾಗಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ ಮನವೊಲಿಸಿದ ಹೈಕಮಾಂಡ್​; ಕೋಲಾರ ಕ್ಷೇತ್ರದಿಂದ ಕೊತ್ತೂರು ಮಂಜುನಾಥ್ ಕಣಕ್ಕೆ

ಯೋಗೇಶ್​ಗೆ ಲಭಿಸಿದ ಶಿವಮೊಗ್ಗ ನಗರ ಕ್ಷೇತ್ರದ ಟಿಕೆಟ್: ಶಿವಮೊಗ್ಗ ನಗರ ವಿಧಾನಸಭೆ ಕ್ಷೇತ್ರದ ಅಭ್ಯರ್ಥಿಯಾಗಿ ಹೆಚ್.ಸಿ.ಯೋಗೇಶ್ ಅವರ ಹೆಸರನ್ನು ಘೋಷಿಸಲಾಗಿದೆ. ಹೆಚ್.ಸಿ.ಯೋಗೀಶ್ ಅವರು ಶಿವಮೊಗ್ಗ ಮಹಾನಗರ ಪಾಲಿಕೆಯ ಕಾಂಗ್ರೆಸ್ ಸದಸ್ಯರಾಗಿದ್ದಾರೆ. ಇವರು ಸಾದರ ಲಿಂಗಾಯತ ಸಮಾಜಕ್ಕೆ ಸೇರಿದ್ದಾರೆ. ಇವರ ತಂದೆ ಚಂದ್ರಶೇಖರಪ್ಪನವರು ಶಿವಮೊಗ್ಗ ನಗರ ಕ್ಷೇತ್ರದ ಶಾಸಕರಾಗಿದ್ದರು. ಇವರು ಪಶ್ಚಿಮ ಬಂಗಾಳದ ಚುನಾವಣೆಯಲ್ಲಿ ವೀಕ್ಷಕರಾಗಿ ಕೆಲಸ ಮಾಡಿದ್ದರು. ಇವರ ಸ್ಪರ್ಧೆಯಿಂದ ಶಿವಮೊಗ್ಗ ನಗರದ ಚುನಾವಣಾ ಕಣ ರಂಗೇರಲಿದೆ.

ಇದನ್ನೂ ಓದಿ: ಜಗದೀಶ್ ಶೆಟ್ಟರ್ ನಿವಾಸದಲ್ಲಿ ಬೆಂಬಲಿಗರ ‌ಅಭಿಪ್ರಾಯ ಸಂಗ್ರಹ ಸಭೆ

ಮಾಲತೇಶ್ ಗೋಣಿ ಶಿಕಾರಿಪುರ ಕ್ಷೇತ್ರದ ಅಭ್ಯರ್ಥಿ: ಕಾಂಗ್ರೆಸ್ ಅಭ್ಯರ್ಥಿಯಾಗಿ ಶಿಕಾರಿಪುರದ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷರಾದ ಮಾಲತೇಶ್ ಗೋಣಿ ಅವರನ್ನು ಘೋಷಿಸಿದೆ. ಇವರು ಕಳೆದ ಮೂರು ಚುನಾವಣೆಯಿಂದ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧೆ ಮಾಡಿದ್ದಾರೆ. ಇವರು ತಮ್ಮ ಮೂರು ಚುನಾವಣೆಯಲ್ಲಿ 50 ರಿಂದ 55 ಸಾವಿರ ಮತಗಳನ್ನು ಪಡೆದಿದ್ದರು. ಶಿಕಾರಿಪುರ ಕ್ಷೇತ್ರದಲ್ಲಿ ನಾಗರಾಜ್ ಗೌಡ‌ ಸೇರಿದಂತೆ ಅನೇಕರು ಪೈಪೋಟಿಯಲ್ಲಿದ್ದರು. ಆದರೂ ಸಹ ಕೆಪಿಸಿಸಿ ಮಾಲತೇಶ್ ಗೋಣಿ ಅವರು ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇದಕ್ಕೂ ಮೊದಲು ಶಿವಮೊಗ್ಗ ಜಿಲ್ಲೆಯ ನಾಲ್ಕು ಕ್ಷೇತ್ರದ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿತ್ತು.

ಇದನ್ನೂ ಓದಿ: ಕಟ್ಟುನಿಟ್ಟಿನ ಚುನಾವಣಾ ನೀತಿ ಸಂಹಿತೆ.. ಪ್ರತಿ ಚುನಾವಣೆಯಲ್ಲೂ ಹೆಚ್ಚುತ್ತಲೇ ಇದೆ ಕುರುಡು ಕಾಂಚಾಣದ ಕುಣಿತ

ಇದನ್ನೂ ಓದಿ: ಶೆಟ್ಟರ್​​ಗೆ ಟಿಕೆಟ್ ತಪ್ಪಿಸುತ್ತಿರುವುದು ನಾವಲ್ಲ.. ಎಲ್ಲ ವದಂತಿಯಷ್ಟೇ: ಸಿಎಂ ಬೊಮ್ಮಾಯಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.