ETV Bharat / state

ಹರ್ಷನ ಕೊಲೆಗೆ ಬಳಸಿದ್ದು ಬೇರೇ ರಾಜ್ಯದ ಕಾರು: ಎಸ್ಪಿ ಲಕ್ಷ್ಮಿಪ್ರಸಾದ್ - ವಿಡಿಯೋ ಕಾಲ್ ಮಾಡಿದವರು ಪತ್ತೆ

ಕೊಲೆ ಮಾಡಲು ಬಳಸಿಕೊಂಡಿದ್ದ ಕಾರು, ಆರೋಪಿಗಳು ತಪ್ಪಿಸಿಕೊಳ್ಳಲು ಬಳಸಿದ್ದ ಕಾರು ಮತ್ತು ಬೈಕ್​ನನ್ನು ವಶಕ್ಕೆ ಪಡೆದಿದ್ದೇವೆ. ಕೊಲೆ ಮಾಡಲು ಬೇರೆ ರಾಜ್ಯದ ಕಾರನ್ನು ಬಳಸಿಕೊಂಡಿದ್ದಾರೆ. ಆ ಕಾರು ಯಾರದ್ದು, ಶಿವಮೊಗ್ಗಕ್ಕೆ ಯಾಕೆ ಬಂತು, ಕಾರಿನ ಮಾಲೀಕರು ಯಾರು ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಎಸ್​​ಪಿ ಲಕ್ಷ್ಮಿಪ್ರಸಾದ್ ಹೇಳಿದ್ದಾರೆ.

SP Laxmiprasad
ಎಸ್ಪಿ ಲಕ್ಷ್ಮೀಪ್ರಸಾದ್
author img

By

Published : Feb 25, 2022, 7:46 PM IST

Updated : Feb 25, 2022, 9:24 PM IST

ಶಿವಮೊಗ್ಗ: ಬಜರಂಗ ದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹತ್ತು ಜನರನ್ನು ಬಂಧಿಸಿದ್ದೇವೆ. ವಶಕ್ಕೆ ಪಡೆದವರ ವಿಚಾರಣೆ ಆರಂಭಿಸುತ್ತೇವೆ. ಹದಿನಾಲ್ಕು ದಿನದ ಬಳಿಕ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳುತ್ತೇವೆ ಎಂದು ಶಿವಮೊಗ್ಗ ಎಸ್​​ಪಿ ಲಕ್ಷ್ಮಿಪ್ರಸಾದ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಲೆ ಮಾಡಲು ಬಳಸಿಕೊಂಡಿದ್ದ ಕಾರು, ಆರೋಪಿಗಳು ತಪ್ಪಿಸಿಕೊಳ್ಳಲು ಬಳಸಿದ್ದ ಕಾರು ಮತ್ತು ಬೈಕ್​ನನ್ನು ವಶಕ್ಕೆ ಪಡೆದಿದ್ದೇವೆ. ಕೊಲೆ ಮಾಡಲು ಬೇರೆ ರಾಜ್ಯದ ಕಾರನ್ನು ಬಳಸಿಕೊಂಡಿದ್ದಾರೆ. ಆ ಕಾರು ಯಾರದ್ದು, ಶಿವಮೊಗ್ಗಕ್ಕೆ ಯಾಕೆ ಬಂತು, ಕಾರಿನ ಮಾಲೀಕರು ಯಾರು ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದರು.

ಶಿವಮೊಗ್ಗ ಎಸ್​​ಪಿ ಲಕ್ಷ್ಮಿಪ್ರಸಾದ್

ವಿಡಿಯೋ ಕಾಲ್ ಮಾಡಿದವರು ಪತ್ತೆ: ಹರ್ಷನ ಮೊಬೈಲ್ ಇದುವರೆಗೆ ಪತ್ತೆಯಾಗಿಲ್ಲ. ಆದರೆ ಆತನಿಗೆ ವಿಡಿಯೋ ಕರೆ ಮಾಡಿದವರನ್ನು ಪತ್ತೆ ಮಾಡಿದ್ದೇವೆ. ಪೊಲೀಸರಿಗೆ ಲಾಂಗ್- ಮಚ್ಚು ತೋರಿಸಿ ಬೆದರಿಕೆ ಹಾಕಿದವರು ಯಾರು ಎಂಬುದು ಗೊತ್ತಾಗಿದೆ. ಅವರನ್ನು ಶೀಘ್ರವೇ ಬಂಧಿಸುತ್ತೇವೆ ಎಂದು ಎಸ್ ಪಿ ಮಾಹಿತಿ ನೀಡಿದರು. ಕೊಲೆ ಹಿಂದೆ ಯಾವುದಾದರೂ ಸಂಘಟನೆಗಳಿವೆಯೇ ಎಂಬ ಬಗ್ಗೆಯೂ ತನಿಖೆ ನಡೆಸುತ್ತಿದ್ದೇವೆ ಎಂದರು.

ಇದನ್ನೂ ಓದಿ: ಹರ್ಷ ಕೊಲೆ ಪ್ರಕರಣ: ಬಂಧಿತ 10 ಆರೋಪಿಗಳು 11 ದಿನ ಪೊಲೀಸ್​​ ಕಸ್ಟಡಿಗೆ

ಖಾಸಿಫ್, ಆಸಿಫ್ ಮೇಲೆ ಐದು, ರಿಹಾನ್ ಮೇಲೆ ಮೂರು ಹಾಗೂ ಅಪ್ನಾನ್ ಮೇಲೆ ಎರಡು ಕಾನೂನು ಸುವ್ಯವಸ್ಥೆ ಪ್ರಕರಣಗಳಿವೆ. ಉಳಿದಂತೆ ಇವರ ಮೇಲೆ ಹಲವು ಡಕಾಯಿತಿ, ಕಳ್ಳತನ ಪ್ರಕರಣಗಳು ದಾಖಲಾಗಿವೆ. ಕೊಲೆಯಾದ ಹರ್ಷನ ಮೇಲೆ ರಿಲಿಜಿಯನ್ ಸಂಬಂಧಿಸಿದ ಎರಡು ಕೇಸ್​ಗಳಿದ್ದವು ಎಂದು ಹೇಳಿದರು.

Last Updated : Feb 25, 2022, 9:24 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.