ಶಿವಮೊಗ್ಗ : ಕೇಂದ್ರ ಹಾಗೂ ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಇಂದು ಜಿಲ್ಲಾದ್ಯಂತ ರೈತರು ಬೀದಿಗಿಳಿದು ಹೋರಾಟ ನಡೆಸಿದ್ದಾರೆ.
ಶಿವಮೊಗ್ಗದಲ್ಲಿ ರೈತ ಸಂಘದ ಬಸವರಾಜಪ್ಪನವರ ನೇತೃತ್ವದಲ್ಲಿ ಫ್ಲೈ ಓವರ್ ಬಳಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದು, ಹೊಸನಗರದಲ್ಲಿ ರೈತ ಸಂಘದವರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ರಸ್ತೆ ತಡೆ ನಡೆಸಿದರು.
ಈ ವೇಳೆ ಪೊಲೀಸರು 20ಕ್ಕೂ ಹೆಚ್ಚು ರೈತರನ್ನು ಬಂಧಿಸಿದರು. ಸಾಗರ ತಾಲೂಕು ರೈತ ಸಂಘ ತಾಳಗುಪ್ಪದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಆಕ್ರೋಶ ವ್ಯಕ್ತಪಡಿಸಿತು. ಈ ಸಂಬಂಧ ಜಿಲ್ಲಾದ್ಯಂತ ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಿದೆ.