ಶಿವಮೊಗ್ಗ: ವಿಮಾನ ನಿಲ್ದಾಣಕ್ಕಾಗಿ ಭೂಮಿ ಕಳೆದುಕೊಂಡ ಸಂತ್ರಸ್ತರಿಗೆ ಶೀಘ್ರವೇ ನಿವೇಶನ ಹಂಚಿಕೆ ಮಾಡುವಂತೆ ಒತ್ತಾಯಿಸಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ವೇದಾ ವಿಜಯಕುಮಾರ್ ನೇತೃತ್ವದಲ್ಲಿ ಸಂತ್ರಸ್ತರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದರು.
ಈ ಹಿಂದೆ ಸೋಗಾನೆಯಲ್ಲಿ ವಿಮಾನ ನಿಲ್ದಾಣಕ್ಕಾಗಿ ರೈತರಿಂದ ಭೂಮಿ ವಶಪಡಿಸಿಕೊಳ್ಳುವ ಸಂದರ್ಭದಲ್ಲಿ ಸಂತ್ರಸ್ತರಿಗೆ ನಿವೇಶನ ನೀಡುವುದಾಗಿ ಭರವಸೆ ನೀಡಿರುವುದು ನೀಡಲಾಗಿತ್ತು. ಆದರೆ ಕಳೆದ 13 ವರ್ಷಗಳಿಂದ ಸಂತ್ರಸ್ತರಿಗೆ ನಿವೇಶನ ಹಂಚಿಕೆ ಮಾಡಿಲ್ಲ. ಹಾಗಾಗಿ ಶೀಘ್ರವೇ ನಿವೇಶನ ಹಂಚಿಕೆ ಮಾಡಬೇಕು ಎಂದು ಸಂತ್ರಸ್ತರು ಆಗ್ರಹಿಸಿ, ಹಿಂದೆ ಮನವಿ ಸಲ್ಲಿಸಿದ್ದರು.
ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಸಂಸದ ಬಿ.ವೈ. ರಾಘವೇಂದ್ರ ಈ ಬಗ್ಗೆ ಪರಿಶೀಲಿಸಿ ನ್ಯಾಯ ಒದಗಿಸಿಕೊಡುವ ಭರವಸೆ ನೀಡಿದರು. ಈ ವೇಳೆ ಪಿಎಲ್‌ಡಿ ಬ್ಯಾಂಕ್‌ನ ಉಪಾಧ್ಯಕ್ಷರಾದ ಆರ್.ವಿಜಯಕುಮಾರ್, ಸೋಗಾನೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅನಿಲ್ ಸೇರಿದಂತೆ ಮತ್ತಿತರರು ಇದ್ದರು.