ಶಿವಮೊಗ್ಗ: ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಅನಾರೋಗ್ಯಕ್ಕೊಳಗಾದ ತಮ್ಮ ಮೊಮ್ಮಗನಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುವ ಮೂಲಕ ಸರಳತೆ ಮೆರೆದಿದ್ದಾರೆ.
ನಿನ್ನೆ ಸಚಿವರ ಒಂದು ವರ್ಷದ ಮೊಮ್ಮಗನಿಗೆ ಆರೋಗ್ಯದಲ್ಲಿ ಸಣ್ಣ ಪ್ರಮಾಣದ ವ್ಯತ್ಯಾಸ ಕಂಡು ಬಂದಿತು. ಹೀಗಾಗಿ ಮೊಮ್ಮಗನನ್ನು ತೀರ್ಥಹಳ್ಳಿಯ ಸರ್ಕಾರಿ ಜೆ.ಸಿ. ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಿದರು. ನಂತರ ಕೊರೊನಾ ವಾರ್ಡ್ಗೆ ಭೇಟಿ ನೀಡಿ, ಸೋಂಕಿತರ ಆರೋಗ್ಯ ವಿಚಾರಿಸಿದರು.
ಸಣ್ಣಪುಟ್ಟ ಹುದ್ದೆಯಲ್ಲಿದ್ದುಕೊಂಡವರೇ ಪ್ರಭಾವ ಬೀರಿ ಮೆಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುವ ಈ ಸಂದರ್ಭದಲ್ಲಿ ಸರ್ಕಾರಿ ಆಸ್ಪತ್ರೆಯಲ್ಲಿ ತಮ್ಮ ಮೊಮ್ಮಗನಿಗೆ ಗೃಹ ಸಚಿವರು ಚಿಕಿತ್ಸೆ ಕೊಡಿಸಿರುವುದಕ್ಕೆ ಸಾರ್ವಜನಿಕರಿಂದ ಸಾಕಷ್ಟು ಪ್ರಶಂಸೆ ವ್ಯಕ್ತವಾಗಿದೆ.