ETV Bharat / state

ಅಶ್ಲೀಲ ವಿಡಿಯೋ ವೈರಲ್ ಪ್ರಕರಣ: ಆರಗ ಜ್ಞಾನೇಂದ್ರ ಹೇಳಿದ್ದೇನು? - ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ

ತೀರ್ಥಹಳ್ಳಿ ತಾಲೂಕು ವಿದ್ಯಾರ್ಥಿ ಸಂಘಟನೆಯ ಮುಖಂಡನೊಬ್ಬ ಸ್ಥಳೀಯ ಕಾಲೇಜಿನ ವಿದ್ಯಾರ್ಥಿನಿಯೊಂದಿಗಿನ ಅಶ್ಲೀಲ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದ. ಈ ಕುರಿತು ಆರಗ ಜ್ಞಾನೇಂದ್ರ ಪ್ರತಿಕ್ರಿಯಿಸಿದ್ದಾರೆ.

araga jnanendra
ಆರಗ ಜ್ಞಾನೇಂದ್ರ
author img

By

Published : Jun 19, 2023, 8:18 AM IST

ಶಿವಮೊಗ್ಗ : ತೀರ್ಥಹಳ್ಳಿಯಲ್ಲಿ ಯುವತಿಯ ಅಶ್ಲೀಲ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದು, ಈ ಬಗ್ಗೆ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಪೊಲೀಸ್ ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ ಎಂದರು.

ತೀರ್ಥಹಳ್ಳಿಯ ಕಾಲೇಜ್​ ವಿದ್ಯಾರ್ಥಿಯೊಬ್ಬ ಅಶ್ಲೀಲ ವಿಡಿಯೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಾಕಿರುವುದು ವ್ಯಾಪಕವಾಗಿ ಪ್ರಚಾರವಾಗುತ್ತಿದೆ. ಈ ಬಗ್ಗೆ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಪೊಲೀಸ್ ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ. ಅಂತಹ ವಿಡಿಯೋ ರಿಲೀಸ್ ಮಾಡುವ ಅವಶ್ಯಕತೆ ಇಲ್ಲ, ಇಂತಹ ಅಶ್ಲೀಲತೆ ಯಾರಿಗೂ ಶೋಭೆ ತರುವುದಿಲ್ಲ. ಅವರು ಯಾವುದೇ ಸಂಘಟನೆಯಲ್ಲಿದ್ದರೂ ಸಹ ಮುಲಾಜಿಲ್ಲದೇ ಕಾನೂನು ಕ್ರಮ ಕೈಗೊಳ್ಳಬೇಕು. ಅವನೊಬ್ಬ ಕೊಳಕು ಮನುಷ್ಯ. ಈ ಬಗ್ಗೆ ಪೊಲೀಸರು ತನಿಖೆ ಮಾಡುತ್ತಿದ್ದಾರೆ ಎಂದರು.

ಇದನ್ನೂ ಓದಿ : ಅಶ್ಲೀಲ ವಿಡಿಯೋ ಪ್ರಭಾವ : 4ರ ಬಾಲೆಯ ಮೇಲೆ 12 ವರ್ಷದ ಬಾಲಕನಿಂದ ಅತ್ಯಾಚಾರ

ತಾಲೂಕಿನಲ್ಲಿ ನಡೆದ ಯಾವುದೋ ಒಂದು ಘಟನೆಯನ್ನು ಇಟ್ಟುಕೊಂಡು ಏನನ್ನೂ ಹೇಳುವುದಕ್ಕೆ ಆಗುವುದಿಲ್ಲ. ಇತ್ತೀಚಿನ ದಿನಗಳಲ್ಲಿ ಗಾಂಜಾ, ಅಫೀಮು ಮಾರಾಟ ಹೆಚ್ಚಾಗಿ ಆರಂಭವಾಗಿದೆ. ಇದನ್ನು ಮಟ್ಟ ಹಾಕಲು ಪೋಷಕರು ಗಮನ ಹರಿಸಬೇಕು. 3 - 4 ದಿನದಲ್ಲಿ ಶಾಲಾ ಕಾಲೇಜು ಮುಖ್ಯಸ್ಥರು ಹಾಗೂ ಪೊಲೀಸರ ಸಭೆ ಕರೆದು ಚರ್ಚೆ ಮಾಡ್ತೇನೆ. ಕೇವಲ ತೀರ್ಥಹಳ್ಳಿ ಅಲ್ಲ, ರಾಜ್ಯದ ಎಲ್ಲ ಕಡೆ ಇದು ಇದೆ ಎಂದರು.

ಇದನ್ನೂ ಓದಿ : ಹನಿಮೂನ್​ಗೆ ಕರೆದುಕೊಂಡು ಹೋಗಿ ಪತ್ನಿಯ ಅಶ್ಲೀಲ ವಿಡಿಯೋ, ಫೋಟೋ ತೆಗೆದ ಪತಿ... ಹಣಕ್ಕಾಗಿ ಬೇಡಿಕೆ

ಪ್ರಕರಣದ ಹಿನ್ನೆಲೆ : ಕಾಲೇಜೊಂದರ ವಿದ್ಯಾರ್ಥಿ ಹಾಗೂ ಎಬಿವಿಪಿ ತೀರ್ಥಹಳ್ಳಿ ತಾಲೂಕು ಘಟಕದ ಯುವಕನೊಬ್ಬನ ಅಶ್ಲೀಲ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದವು. ಕೆಲವು ಯುವತಿಯರ ಜೊತೆಗೆ ಈತ ಸಲುಗೆಯಿಂದ ಇರುವ ವಿಡಿಯೋ ಮಾಡಿ ಬಳಿಕ ಬ್ಲಾಕ್ ಮೇಲ್ ಮಾಡುತ್ತಿದ್ದ. ಈ ವಿದ್ಯಾರ್ಥಿಯು ಸಂಘಟನೆಯೊಂದರಲ್ಲಿ (ಎಬಿವಿಪಿ) ತೊಡಗಿಸಿಕೊಂಡಿದ್ದ. ಘಟನೆ ಬಳಿಕ ಆರೋಪಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ತೀರ್ಥಹಳ್ಳಿ ಪೊಲೀಸರಿಗೆ ಮನವಿ ಮಾಡಲಾಗಿತ್ತು. ಇದಾದ ಬಳಿಕ ಕರ್ನಾಟಕ ಕಾಂಗ್ರೆಸ್ ಸಹ ಟ್ವೀಟ್ ಮಾಡಿ ಕೂಡಲೇ ಯುವಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿತ್ತು.

ಇದನ್ನೂ ಓದಿ : ವಿದ್ಯಾರ್ಥಿಗಳಿಗೆ ಅಶ್ಲೀಲ ವಿಡಿಯೋ, ಫೋಟೋ ತೋರಿಸುತ್ತಿದ್ದ ಶಿಕ್ಷಕರು: ಶಾಲೆಯಲ್ಲೇ ಹಿಡಿದು ಥಳಿಸಿದ ಪೋಷಕರು

ಆರೋಪಿ ಬಂಧನ : ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಅಶ್ಲೀಲ ವಿಡಿಯೋ ಚಿತ್ರೀಕರಿಸಿಕೊಂಡಿದ್ದ ವಿದ್ಯಾರ್ಥಿ ಸಂಘಟನೆಯ ಮುಖಂಡನನ್ನು ತೀರ್ಥಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ತೀರ್ಥಹಳ್ಳಿ ಪೊಲೀಸರು ಸುಮೋಟೂ ಪ್ರಕರಣ ದಾಖಲಿಸಿಕೊಂಡಿದ್ದರು. ಇದೀಗ ವಿದ್ಯಾರ್ಥಿ ಸಂಘಟನೆ ಮುಖಂಡನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಇದನ್ನೂ ಓದಿ : ಶಿವಮೊಗ್ಗ: ತುಂಗಾ‌ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಪ್ರಾಧ್ಯಾಪಕರು ನೀರುಪಾಲು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.