ಶಿವಮೊಗ್ಗ: ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ನಲ್ಲಿ ತೊಡಗಿದ್ದ ಇಬ್ಬರು ಆರೋಪಿಗಳನ್ನು ಸಿಇಎನ್ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.
ನಗರದ ಮಲವಗೊಪ್ಪ ಬಸ್ಸ್ಟಾಪ್ನಲ್ಲಿ ಕ್ರಿಕೆಟ್ ಬೆಟ್ಟಿಂಗ್ನಲ್ಲಿ ತೊಡಗಿರುವ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಿಇಎನ್ ಪೊಲೀಸ್ ಠಾಣೆಯ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರಿಂದ 40 ಸಾವಿರ ರೂಪಾಯಿ ಹಾಗೂ ಮೊಬೈಲ್ ಫೋನ್‍ಗಳನ್ನು ವಶಕ್ಕೆ ಪಡೆಯಲಾಗಿದೆ.