ಶಿವಮೊಗ್ಗ : ಮನೆಗಳಿಗೆ ನುಗ್ಗಿ ಕಳ್ಳತನ ಮಾಡುತ್ತಿದ್ದ ಖದೀಮನನ್ನು ಸಾಗರ ಪೊಲೀಸರು ಬಂಧಿಸಿದ್ದಾರೆ. ಈತನಿಂದ 5 ಲಕ್ಷ ರೂ ಮೌಲ್ಯದ ಚಿನ್ನಾಭರಣಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ
ಟಿಪ್ಪು ನಗರದ ನಿವಾಸಿ ತಸ್ಲಿಮ್ ಬಂಧನಕ್ಕೊಳಗಾದ ಕಳ್ಳ. ಈತನನ್ನು ಸಾಗರ ಗ್ರಾಮಾಂತರ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ತಸ್ಲಿಮ್ ಅನುಮಾನಾಸ್ಪದವಾಗಿ ತಿರುಗಾಡುತ್ತಿರುವುದನ್ನು ಗಮನಿಸಿ ಪೊಲೀಸರು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ನಡೆಸಿದ ವೇಳೆ, ತಾನು ಸಾಗರದಲ್ಲಿ ಕಳ್ಳತನ ಮಾಡಲು ಬಂದಿದ್ದು, ಹಿಂದೆ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮನೆಗಳ್ಳತನ ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ.