ಶಿವಮೊಗ್ಗ: ಮಾಸಿಕ 12 ಸಾವಿರ ರೂ. ವೇತನ ನಿಗದಿಪಡಿಸಬೇಕು ಹಾಗೂ ಬಾಕಿ ಉಳಿಸಿಕೊಂಡಿರುವ ಪ್ರೋತ್ಸಾಹ ಧನ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಕೊರೋನಾ ವಾರಿಯರ್ಸ್ಆಗಿ ಸೇವೆ ಸಲ್ಲಿಸಿದ ನಮ್ಮ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸಿ, ನಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಕಾರ್ಯಕರ್ತೆಯರು ಮನವಿ ಮಾಡಿದರು.
ಬಾಕಿ ಉಳಿಸಿಕೊಂಡಿರುವ ಪ್ರೋತ್ಸಾಹ ಧನವನ್ನು ಬಿಡುಗಡೆ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಸರ್ಕಾರ ಕೂಡಲೇ ಈಡೇರಿಸಬೇಕು. ಇಲ್ಲವಾದರೆ ಸರ್ಕಾರದ ವಿರುದ್ಧ ಹೋರಾಟ ಮಾಡುವುದಾಗಿ ಎಚ್ಚರಿಕೆ ರವಾನಿದರು.