ಶಿವಮೊಗ್ಗ: ದೊಡ್ಡಪೇಟೆ ಪೊಲೀಸ್ ಠಾಣೆಯ ಎಎಸ್ಐಗೆ ಕೊರೊನಾ ಪಾಸಿಟಿವ್ ಬಂದಿದ್ದು, ಮೆಗ್ಗಾನ್ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎಎಸ್ಐಗೆ ಮೊದಲು ಜ್ವರ ಕಾಣಿಸಿಕೊಂಡಿತ್ತು. ಪರೀಕ್ಷೆಗೆ ಒಳಪಡಿಸಿದಾಗ ಸೋಂಕು ತಗುಲಿರುವುದು ಗೊತ್ತಾಗಿದೆ.
ಕಳ್ಳತನದ ಆರೋಪಿಯ ಸಂಪರ್ಕದಿಂದ ಅವರಿಗೆ ಸೋಂಕು ಅಂಟಿದೆ. ಕಳ್ಳನನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವ ಮುನ್ನ ಕೊರೊನಾ ಪರೀಕ್ಷೆ ನಡೆಸಲಾಯಿತು. ಆಗ ಆತನಿಗೆ ಪಾಸಿಟಿವ್ ಇರುವುದು ಗೊತ್ತಾಗಿದೆ. ಕಳ್ಳನನ್ನು ಬಂಧಿಸಲು ಹೋಗಿದ್ದ ಸಿಬ್ಬಂದಿಯನ್ನೂ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ.