ಶಿವಮೊಗ್ಗ: ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಎಸ್ಐ ಕೊರೊನಾ ಸೋಂಕಿಗೆ ಒಳಗಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ.
ಶಿವಮೊಗ್ಗದ ಸಿ.ಇ.ಎನ್ ಪೊಲೀಸ್ ಠಾಣೆಯಲ್ಲಿ ಎಎಸ್ಐ ಆಗಿದ್ದ ಮಂಜುನಾಥ್(58) ಮೃತಪಟ್ಟ ವ್ಯಕ್ತಿ. ಜಿಲ್ಲೆಯ ಅಪರಾಧ ವಿಭಾಗದಲ್ಲಿ ಹಲವಾರು ವರ್ಷಗಳಿಂದ ಉತ್ತಮ ಸೇವೆ ಸಲ್ಲಿಸಿದ್ದ ಇವರು, ಕೊರೊನಾ ಸೋಂಕಿಗೆ ಒಳಗಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದ ಪರಿಣಾಮ ಇಂದು ಕೊನೆಯುಸಿರೆಳೆದಿದ್ದಾರೆ.
ಇಲಾಖೆಗೆ ಉತ್ತಮ ಸೇವೆ ನೀಡಿದ್ದ ಮಂಜುನಾಥ್ ಅಗಲಿಕೆಗೆ ಜಿಲ್ಲಾ ಪೊಲೀಸ್ ಇಲಾಖೆ ಕಂಬನಿ ಮಿಡಿದಿದೆ.