ETV Bharat / state

ಬಿಜೆಪಿ ವಿಪಕ್ಷ ನಾಯಕನನ್ನು ಆಯ್ಕೆ ಮಾಡುವ ತನಕ ಕುಮಾರಸ್ವಾಮಿಯವರೇ ವಿಪಕ್ಷ ನಾಯಕರಾಗಲಿ: ಆಯನೂರು ಮಂಜುನಾಥ್ - etv bharat kannada

ಬಿಜೆಪಿಯವರು ಕೊನೆ ಪಕ್ಷ ವಿಪಕ್ಷ ನಾಯಕನನ್ನು ಆಯ್ಕೆ ಮಾಡುವ ತನಕವಾದರೂ ಕುಮಾರಸ್ವಾಮಿಯವರೇ ನಮ್ಮ ಪಕ್ಷದ ಪರವಾಗಿ ನಾಯಕರಾಗಲಿ ಎನ್ನಬೇಕು ಎಂದು ಆಯನೂರು ಮಂಜುನಾಥ್ ಲೇವಡಿ ಮಾಡಿದ್ದಾರೆ.

ayanur-manjunath-says-make-kumaraswamy-as-a-opposition-leader-of-assembly
ಬಿಜೆಪಿ ವಿಪಕ್ಷ ನಾಯಕನನ್ನು ಆಯ್ಕೆ ಮಾಡುವ ತನಕ ಕುಮಾರಸ್ವಾಮಿಯವರೇ ವಿಪಕ್ಷ ನಾಯಕರಾಗಲಿ: ಆಯನೂರು ಮಂಜುನಾಥ್
author img

By

Published : Jul 11, 2023, 9:12 PM IST

Updated : Jul 12, 2023, 2:33 PM IST

ಆಯನೂರು ಮಂಜುನಾಥ್

ಶಿವಮೊಗ್ಗ: ಬಿಜೆಪಿಯವರು ವಿಪಕ್ಷ ನಾಯಕನನ್ನು ಆಯ್ಕೆ ಮಾಡುವ ತನಕ ಕುಮಾರಸ್ವಾಮಿಯವರೇ ವಿಪಕ್ಷ ನಾಯಕರಾಗಲಿ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಬಜೆಟ್ ಮಂಡಿಸುವಾಗ ಒಂದು ಹೊಸ ಪರಂಪರೆಯನ್ನೇ ಸೃಷ್ಟಿಸಿದ್ದಾರೆ. ಅದೇನೆಂದರೆ ಹಳೆಯ ಸರ್ಕಾರವನ್ನು ಟೀಕಿಸುವುದಾಗಿದೆ. ಈ ಟೀಕೆಗೆ ಬಿಜೆಪಿ ಉತ್ತರ ಕೊಡಬೇಕಾದ ಅವಶ್ಯಕತೆ ಇದೆ. ಆದರೆ ಅವರಿನ್ನೂ ವಿಪಕ್ಷ ನಾಯಕನನ್ನೇ ಆಯ್ಕೆ ಮಾಡಿಲ್ಲ ಎಂದರು.

ಬಿಜೆಪಿಯವರು ಕೊನೆ ಪಕ್ಷ ವಿಪಕ್ಷ ನಾಯಕನನ್ನು ಆಯ್ಕೆ ಮಾಡುವ ತನಕವಾದರೂ ಕುಮಾರಸ್ವಾಮಿಯವರೇ ನಮ್ಮ ಪಕ್ಷದ ಪರವಾಗಿ ನಾಯಕರಾಗಲಿ ಎನ್ನಬೇಕು ಎಂದು ಲೇವಡಿ ಮಾಡಿದರು. ಹೊಸ ಸರ್ಕಾರ ಬಂದಿದೆ. ಬಜೆಟ್ ಕೂಡ ಮಂಡನೆಯಾಗಿದೆ. ಗ್ಯಾರಂಟಿಗಳಿಗೆ ಅನುಕೂಲವಾಗುವಂತಹ ಬಜೆಟ್ ಮಂಡನೆಯಾಗಿದೆ. ಬಜೆಟ್‌ಗೆ ಸಂಬಂಧಿಸಿದಂತೆ ಸದನದಲ್ಲಿ ಚರ್ಚೆ ಕೂಡ ನಡೆಯುತ್ತಿದೆ. ಈ ಬಾರಿಯ ಬಜೆಟ್‌ನಲ್ಲಿ ಆಶಾದಾಯಕ ನಿರಾಶಾದಾಯಕ ಎರಡೂ ಇವೆ ಎಂದು ಹೇಳಿದರು.

ಇನ್ನು ಬಜೆಟ್‌ನಲ್ಲಿ ಕಾರ್ಮಿಕ ವಲಯಕ್ಕೆ ಒತ್ತುಕೊಟ್ಟಿಲ್ಲ. ಪೌರ ಕಾರ್ಮಿಕರ ಖಾಯಂ ಬಗ್ಗೆ ಯಾವುದೇ ಪ್ರಸ್ತಾಪವಿಲ್ಲ. ಯುವಕರಿಗಾಗಿ ಯಾವ ಆಶ್ವಾಸನೆಗಳು ಇಲ್ಲ. ಕ್ರೀಡೆಗೆ ಆದ್ಯತೆ ಇಲ್ಲ. ಆಟೋ ಹಾಗೂ ಟ್ಯಾಕ್ಸಿ ಡ್ರೈವರ್​​ಗಳ ಪರವಾಗಿ ಕಲ್ಯಾಣ ಮಂಡಳಿ ರಚನೆ ಮಾಡುತ್ತೇವೆ. ವಿಮೆ ನೀಡುತ್ತೇವೆ ಎಂದಿದ್ದರು. ಅದಕ್ಕೂ ಬಜೆಟ್‌ನಲ್ಲಿ ಜಾಗವಿಲ್ಲ. ಸರ್ಕಾರಿ ಹಳೆ ಪಿಂಚಣಿ ಜಾರಿಗೆ ಸಮಿತಿ ರಚಿಸುತ್ತೇವೆ ಎಂದಷ್ಟೇ ಹೇಳಿದ್ದಾರೆ. ಆ ಬಗ್ಗೆಯೂ ಪ್ರಸ್ತಾಪವಿಲ್ಲ. ನೌಕರರ ಏಳನೇ ವೇತನ ಜಾರಿಗೆ ಕ್ರಮ ಕೈಗೊಂಡಿಲ್ಲ. ಹೀಗೆ ಹಲವು ಹೊಣೆಗಾರಿಕೆಗಳು ಸರ್ಕಾರ ಮೇಲಿವೆ. ಸರ್ಕಾರ ಏನೋ ಟೇಕಾಫ್ ಆಗಿದೆ. ಆದರೆ ಅದರ ಹಾರಟ ಮಾತ್ರ ನಿಲ್ಲಬಾರದು ಎಂದರು.

ಪದವೀಧರರ ಕ್ಷೇತ್ರದಿಂದ ಸ್ಪರ್ಧಿಸುವುದು ಖಚಿತ: ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧೆ ಸಂಬಂಧ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಈ ಬಾರಿ ಪದವೀಧರರ ಕ್ಷೇತ್ರದಿಂದ ಸ್ಪರ್ಧಿಸುವುದು ಖಚಿತ. ಹಾಗೆಯೇ ಶಿಕ್ಷಕರ ಕ್ಷೇತ್ರದಿಂದ ಭೋಜೇಗೌಡರು ಸ್ಪರ್ಧೆ ಮಾಡುತ್ತಾರೆ. ಕಾಂಗ್ರೆಸ್‌ನವರ ಹಾಗೆ ನಾವೇನೂ ಚುನಾವಣೆಗೆ ಇನ್ನು ಒಂದು ವರ್ಷವಿದ್ದರೂ ಎರಡು ಲಕ್ಷ ರೂ. ಕೊಟ್ಟು ಅರ್ಜಿ ಹಾಕಬೇಕಾಗಿಲ್ಲ. ನಮ್ಮ ಪಕ್ಷದ ಸಿದ್ಧಾಂತಗಳೇ ಬೇರೆ ಇವೆ. ನಾವೇನೂ ಬಿಜೆಪಿಯವರ ಹತ್ತಿರ ಹೋಗುತ್ತಿಲ್ಲ. ಬಿಜೆಪಿಯವರೇ ನಮ್ಮ ಬಳಿ ಬರುತ್ತಾರೆ. ಬಿಜೆಪಿ ಈಗಾಗಲೇ ಸ್ಥಳೀಯ ಪಕ್ಷಗಳ ಜೊತೆ ಹೊಂದಾಣಿಕೆ ಮಾಡಿಕೊಳ್ಳುವ ಬಗ್ಗೆ ಆಸಕ್ತವಾಗಿದೆ ಎಂದು ಹೇಳಿದರು.

ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಮಾತನಾಡಿ, ಶಿವಮೊಗ್ಗ ನಗರಕ್ಕೆ ಸಂಬಂಧಿಸಿದಂತೆ ಅನೇಕ ಸಮಸ್ಯೆಗಳು ಹಾಗೆಯೇ ಉಳಿದಿವೆ. ನೂತನ ಶಾಸಕರು ಇದರ ಬಗ್ಗೆ ಗಮನ ಹರಿಸಬೇಕು. ಮುಖ್ಯವಾಗಿ ಜೆನ್‌ನರ್ಮ್ ಯೋಜನೆಯಡಿ ನಗರಕ್ಕೆ 45 ಹೊಸ ಬಸ್‌ಗಳನ್ನು ಬಿಡುಗಡೆ ಮಾಡಬೇಕು. ವಿಳಂಬವಾಗುತ್ತಿರುವ ರೈಲ್ವೆ, ಮೇಲ್ಸೇತುವೆ ಕಾಮಗಾರಿಗಳನ್ನು ಬೇಗನೆ ಮುಗಿಸಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ: ಕುಮಾರಸ್ವಾಮಿ ಮೊದಲು ಪೆನ್​ ​ಡ್ರೈವ್ ರಿಲೀಸ್​ ಮಾಡ್ಲಿ: ಜಮೀರ್ ಅಹ್ಮದ್

Last Updated : Jul 12, 2023, 2:33 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.