ಶಿವಮೊಗ್ಗ : ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಇಂದು ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಅವರಿಗೂ ಸೋಂಕು ದೃಢವಾಗಿದೆ.
ನಾನು ಇಂದು ಕೊರೊನಾ ಚಿಕಿತ್ಸೆಗೆ ಒಳಗಾಗಿರುವೆ. ವರದಿಯಲ್ಲಿ ಪಾಸಿಟಿವ್ ಬಂದಿದೆ. ಯಾವುದೇ ರೋಗ ಲಕ್ಷಣಗಳು ಕಂಡು ಬಂದಿಲ್ಲವಾದ್ರೂ ವೈದ್ಯರ ಸಲಹೆ ಮೇರೆಗೆ ಮನೆಯಲ್ಲಿ ಕ್ವಾರಂಟೈನ್ಗೊಳಗಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ.
ನಿಮ್ಮ ಆಶೀರ್ವಾದಗಳೊಂದಿಗೆ ನಿಮ್ಮ ಸೇವೆಗೆ ಹಿಂತಿರುಗುವ ವಿಶ್ವಾಸವಿದೆ. ನನ್ನೊಂದಿಗೆ ಸಂಪರ್ಕಕ್ಕೆ ಬಂದಂತಹ ಎಲ್ಲರೂ ಜಾಗೃತರಾಗಿ ಎಂದು ಮನವಿ ಮಾಡುತ್ತೇನೆ ಎಂದು ಫೇಸ್ಬುಕ್ನಲ್ಲಿ ಬರೆದುಕೊಂಡಿದ್ದಾರೆ.