ETV Bharat / state

ನೈತಿಕತೆ ಗಮನದಲ್ಲಿಟ್ಟುಕೊಂಡು ಈಶ್ವರಪ್ಪ ರಾಜೀನಾಮೆ ಕೊಟ್ಟಿದ್ದಾರೆ: ಆಯನೂರು ಮಂಜುನಾಥ್

ಸಚಿವ ಕೆ. ಎಸ್​.ಈಶ್ವರಪ್ಪ ಅವರು ಸಾರಿ, ಸಾರಿ ಹೇಳುತ್ತಿದ್ದಾರೆ. ನನ್ನಿಂದ ಯಾವುದೇ ಕಾಮಗಾರಿ ಮಂಜೂರಾಗಿಲ್ಲ ಎಂದು. ಆದರೂ, ಅಧಿಕಾರ ನಡೆಸಿದ ಸಿದ್ದರಾಮಯ್ಯ ಹಾಗೂ ಡಿಕೆಶಿಗೆ ಅರ್ಥ ಆಗುತ್ತಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

author img

By

Published : Apr 15, 2022, 9:26 PM IST

Updated : Apr 15, 2022, 9:49 PM IST

ಆಯನೂರು ಮಂಜುನಾಥ್
ಆಯನೂರು ಮಂಜುನಾಥ್

ಶಿವಮೊಗ್ಗ: ಪಕ್ಷಕ್ಕೆ ಮುಜುಗರ ಆಗಬಾರದು ಎಂದು ನೈತಿಕತೆ ಗಮನದಲ್ಲಿಟ್ಟುಕೊಂಡು ಈಶ್ವರಪ್ಪ ರಾಜೀನಾಮೆ ನೀಡಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತನಿಖೆ ನಡೆಯುತ್ತಿದೆ. ತನಿಖೆಯಲ್ಲಿ ಸತ್ಯಾಸತ್ಯತೆ ಹೊರ ಬರುತ್ತೆ. ಇದು ಕಾಂಗ್ರೆಸ್​ನ ಪಿತೂರಿ ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಮಾತನಾಡಿದರು

ಕೆ. ಎಸ್​.ಈಶ್ವರಪ್ಪ ಅವರು ಸಾರಿ, ಸಾರಿ ಹೇಳುತ್ತಿದ್ದಾರೆ. ನನ್ನಿಂದ ಯಾವುದೇ ಕಾಮಗಾರಿ ಮಂಜೂರಾಗಿಲ್ಲ ಎಂದು. ಆದರೂ, ಅಧಿಕಾರ ನಡೆಸಿದ ಸಿದ್ದರಾಮಯ್ಯ ಹಾಗೂ ಡಿಕೆಶಿಗೆ ಅರ್ಥ ಆಗುತ್ತಿಲ್ಲ ಎಂದರು. ಮುಂದೆ ಎಲೆಕ್ಷನ್ ಬರುತ್ತಿದೆ. ಇದು ಒಂದು ಷಡ್ಯಂತ್ರ. ಅಲ್ಪಸಂಖ್ಯಾತರ ಒಲೈಕೆಗೆ ಒಳಗೊಂಡು ಅತಂತ್ರ ಆಗಿದ್ದರೂ ಈ ವಿಷಯ ಇಟ್ಟುಕೊಂಡು ಹೋರಾಟ ಮಾಡುತ್ತಿದ್ದಾರೆ. ಇನ್ನೂ ಹತ್ತು ವರ್ಷಗಳ ಕಾಲ ಹೀಗೆ ಹೋರಾಟ ಮಾಡುತ್ತಲೇ ಇರಲಿ ಎಂದು ದೇವರಲ್ಲಿ ಕೇಳಿಕೊಳ್ಳುತ್ತೇನೆ ಎಂದರು.

ಆರೋಪವೇನು? : ಬೆಳಗಾವಿ ಮೂಲದ ಬಿಜೆಪಿ ಕಾರ್ಯಕರ್ತ ಸಂತೋಷ್ ಪಾಟೀಲ್, ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‍ ರಾಜ್ ಸಚಿವ ಈಶ್ವರಪ್ಪ ಅವರ ಮೇಲೆ ಗಂಭೀರ ಆರೋಪ ಮಾಡಿದ್ದರು. ಸಚಿವ ಈಶ್ವರಪ್ಪ ಅವರು ಶೇ. 40ರಷ್ಟು ಕಮೀಷನ್ ಕೇಳುತ್ತಿದ್ದಾರೆ ಎಂದು ದೂರಿ ಪ್ರಧಾನಿ ಕಚೇರಿಗೆ ಪತ್ರ ಬರೆದಿದ್ದರು.

ಮೂರು ದಿನಗಳ ಹಿಂದೆಯಷ್ಟೇ ಗುತ್ತಿಗೆದಾರ ಸಂತೋಷ ಪಾಟೀಲ್ ಉಡುಪಿಯ ಲಾಡ್ಜ್​​ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದಕ್ಕೂ ಮುನ್ನ ಸಂತೋಷ ವಾಟ್ಸಾಪ್ ಮೂಲಕ ಡೆತ್‍ನೋಟ್ ಕಳಿಸಿದ್ದಾರೆ ಎನ್ನಲಾಗುತ್ತಿದ್ದು, ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ.

ಓದಿ: 'ಸಂತೋಷ್ ಪಾಟೀಲ್ ಆತ್ಮಹತ್ಯೆ ಈಶ್ವರಪ್ಪರ ನಿರ್ಲಕ್ಷ್ಯದಿಂದ ನಡೆದಿದೆ'

Last Updated : Apr 15, 2022, 9:49 PM IST

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.