ಶಿವಮೊಗ್ಗ: ಜಿಲ್ಲೆಯಲ್ಲಿ 293 ಕೋಟಿ ಅನುದಾನದ ಕಾಮಗಾರಿಗೆ ಶಂಕುಸ್ಥಾಪನೆಯ ಉದ್ಘಾಟನೆ ಮಾಡಿದ್ದೇನೆ. ಇನ್ನೆರಡು ವರ್ಷದಲ್ಲಿ ಜಿಲ್ಲೆಯ ಚಿತ್ರಣವನ್ನೇ ಬದಲು ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಜಿಲ್ಲೆಯಲ್ಲಿ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು ನಾನು, ಈಶ್ವರಪ್ಪ, ರಾಘವೇಂದ್ರ ಸೇರಿಕೊಂಡು ಜಿಲ್ಲೆಯ ಅಭಿವೃದ್ಧಿ ಮಾಡುತ್ತೇವೆ. ಶಿವಮೊಗ್ಗ ಅಷ್ಟೇ ಅಲ್ಲ ರಾಜ್ಯದ ಸಂಪೂರ್ಣ ಅಭಿವೃದ್ಧಿ ಮಾಡುತ್ತೇವೆ ಎಂದರು.
ಶಿವಮೊಗ್ಗದಲ್ಲಿ ಆಸ್ತಿ ನೋಂದಣಿಗೆ ಕಡ್ಡಾಯವಾಗಿದ್ದ ಪ್ರಾಪರ್ಟಿ ಕಾರ್ಡ್ ವಿನಾಯ್ತಿಗೆ ಸೂಚಿಸಿದ್ದೇನೆ. ಸಾರ್ವಜನಿಕ ವಲಯದಲ್ಲಿ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಸ್ವಲ್ಪ ಹಣಕಾಸಿನ ತೊಂದರೆ ಇದೆ. ನೆರೆ ಹಾವಳಿ, ಬರದಿಂದಾಗಿ ತೊಂದರೆ ಆಗಿದೆ. ಫೆಬ್ರವರಿವರೆಗೆ ತಾಳ್ಮೆಯಿಂದಿರಿ, ನೂತನ ಬಜೆಟ್ ನಂತರ ಹೊಸ ಹೊಸ ಯೋಜನೆ ಕೈಗೆತ್ತಿಕೊಳ್ಳುತ್ತೇನೆ ಎಂದರು.
ಕೈಗಾರಿಕೋದ್ಯಮಿಗಳಿಗೆ ವಿನಂತಿ ಮಾಡುತ್ತೇನೆ ರಾಜ್ಯದ ಜನತೆ ಸಂಕಷ್ಟದಲ್ಲಿ ಇರುವಾಗ ಅವರ ನೆರವಿಗೆ ಧಾವಿಸಬೇಕು ಎಂದು ಮನವಿ ಮಾಡಿದ್ದು, ನಾನು ಯಾವುದೇ ರಾಜಕಾರಣ ಮಾಡಲು, ಮಾತನಾಡಲು ಇಷ್ಟಪಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.