ETV Bharat / state

ಜವಾಬ್ದಾರಿ ನೀಡಿದ್ದಾರೆ, ರಾಜ್ಯದಲ್ಲಿ 140 ಸ್ಥಾನ ಗೆಲ್ಲಿಸುತ್ತೇನೆ : ಬಿ.ಎಸ್. ಯಡಿಯೂರಪ್ಪ

author img

By

Published : Sep 3, 2022, 11:42 AM IST

140ರ ಗುರಿಯನ್ನು ಮೋದಿಯವರೂ ಹೇಳಿದ್ದಾರೆ. ಎಲ್ಲರೂ ಒಗ್ಗೂಡಿ ರಾಜ್ಯದ ಉದ್ದಗಲಕ್ಕೂ ಸಂಚರಿಸಿ ಮತ್ತೆ ಬಿಜೆಪಿ ಸರ್ಕಾರವನ್ನು ತರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Yediyurappa reaction about core  committee meeting
ಬಿ.ಎಸ್.ಯಡಿಯೂರಪ್ಪ

ಶಿವಮೊಗ್ಗ: ಚುನಾವಣೆ ವೇಳೆ ನನ್ನನ್ನು ಕೇಂದ್ರೀಯ ಸಂಸದೀಯ ಮಂಡಳಿಗೆ ಆಯ್ಕೆ ಮಾಡಿದ್ದಾರೆ. ಮುಂದಿನ ಚುನಾವಣೆಗೆ ರಾಜ್ಯದ ಉದ್ದಗಲಕ್ಕೂ ಸಂಚರಿಸಿ 140 ಹೆಚ್ಚು ಸ್ಥಾನಗಳನ್ನು ಗೆಲ್ಲಿಸುತ್ತೆನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ಶಿವಮೊಗ್ಗದಲ್ಲಿಂದು ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳೂರಿಗೆ ಬಂದಾಗ ಅವರೂ ಕೂಡ 140ರ ಗುರಿ ಹೇಳಿದ್ದಾರೆ. ಎಲ್ಲರನ್ನೂ ಬಳಸಿಕೊಂಡು ರಾಜ್ಯ ಪ್ರವಾಸ ಮಾಡುತ್ತೇವೆ. ಪ್ರಚಾರಕ್ಕೆ ಮೊದಿಯವರೂ ಬರುವುದಾಗಿ ಹೇಳಿದ್ದಾರೆ. ಎಲ್ಲರನ್ನೂ ಸೇರಿಸಿಕೊಂಡು ಮತ್ತೆ ರಾಜ್ಯದಲ್ಲಿ ಸರ್ಕಾರ ಸ್ಥಾಪನೆ ಮಾಡುತ್ತೇವೆ ಎಂದು ಭರವಸೆ ವ್ಯಕ್ತಪಡಿಸಿದರು.

140 ಸ್ಥಾನ ಗೆಲ್ಲುವ ಗುರಿ ಇದೆ

ಶಿವಮೊಗ್ಗದಲ್ಲಿ ಬೃಹತ್​ ಕಾರ್ಯಕ್ರಮ : ಎಲ್ಲರೊಂದಿಗೆ ಮಾತನಾಡಿ ಎಲ್ಲುರೂ ಒಪ್ಪಿದಲ್ಲಿ ಶೀಘ್ರದಲ್ಲಿಯೇ ದಿನಾಂಕ ನಿಗದಿಪಡಿಸಿ ಶೀಘ್ರದಲ್ಲಿಯೇ ಶಿವಮೊಗ್ಗದಲ್ಲಿ ಬಿಜೆಪಿ ಸಮಾವೇಶ ನಡೆಸಲಾಗುವುದು. ಸಮಾವೇಶಕ್ಕೆ ಒಂದು ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ಜನ ಸೇರಿಸಲಾಗುವುದು. ಪ್ರಧಾನಿ ಅವರೇ ತಿಂಗಳಿಗೊಮ್ಮೆ ಖುದ್ದಾಗಿ ಬರುವುದಾಗಿ ಹೇಳಿದ್ದಾರೆ. ಮೋದಿಜೀ ಅವರನ್ನು ಕರೆಯಿಸುವ ಕೆಲಸ ಮಾಡಲಾಗುವುದು ಎಂದರು.

ಇದನ್ನೂ ಓದಿ : ಹೆಲಿಪ್ಯಾಡ್​ನಲ್ಲೇ ಕೋರ್ ಕಮಿಟಿ ಸಭೆ ನಡೆಸಿದ ಪ್ರಧಾನಿ..

ETV Bharat Logo

Copyright © 2024 Ushodaya Enterprises Pvt. Ltd., All Rights Reserved.