ETV Bharat / state

ಅರಣ್ಯ ಇಲಾಖೆಯಿಂದ ತಾಳಗುಪ್ಪ ಗ್ರಾಮದ ಬಗರ್ ಹುಕುಂ ಸಾಗುವಳಿ ತೆರವು..

ತಾಳಗುಪ್ಪ ಗ್ರಾಮದ ಸರ್ವೆ ನಂ. 20ರಲ್ಲಿ ಹೈಕೋರ್ಟ್ ಆದೇಶದ ಮೇರೆಗೆ ಅನಧಿಕೃತವಾಗಿ ಸಾಗುವಳಿ ಮಾಡಿದ ನಾಲ್ವರು ರೈತರ ಜಮೀನನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ತೆರವುಗೊಳಿಸಿದ್ದಾರೆ.

bagar-hukum-land-of-talaguppa-village-cleared-by-forest-department
ಅರಣ್ಯ ಇಲಾಖೆಯಿಂದ ತಾಳಗುಪ್ಪ ಗ್ರಾಮದ ಬಗರ್ ಹುಕುಂ ಸಾಗುವಳಿ ತೆರವು..
author img

By

Published : Mar 20, 2023, 10:21 PM IST

Updated : Mar 20, 2023, 10:56 PM IST

ಅರಣ್ಯ ಇಲಾಖೆಯಿಂದ ತಾಳಗುಪ್ಪ ಗ್ರಾಮದ ಬಗರ್ ಹುಕುಂ ಸಾಗುವಳಿ ತೆರವು..

ಶಿವಮೊಗ್ಗ: ಸೊರಬ ಸಾಗುವಳಿ ರೈತರ ವಿರೋಧದ ನಡುವೆಯೂ ತಾಲೂಕಿನ ತಾಳಗುಪ್ಪ ಗ್ರಾಮದಲ್ಲಿ ಸೋಮವಾರ ಅರಣ್ಯ ಇಲಾಖೆಯ ಅಧಿಕಾರಿಗಳು ಪೊಲೀಸ್ ಸರ್ಪಗಾವಲಿನಲ್ಲಿ ಬಗರ್ ಹುಕುಂ ಸಾಗುವಳಿದಾರರನ್ನು ತೆರವುಗೊಳಿಸಿದರು. ತಾಳಗುಪ್ಪ ಗ್ರಾಮದ ಸರ್ವೆ ನಂ. 20ರಲ್ಲಿ ಹೈಕೋರ್ಟ್ ಆದೇಶದ ಮೇರೆಗೆ ಅನಧಿಕೃತವಾಗಿ ಸಾಗುವಳಿ ಮಾಡಿದ ಜಮೀನಿನ ಸುತ್ತ ಅಗಳ ಹೊಡೆಯುವ ಮೂಲಕ ಅರಣ್ಯ ಇಲಾಖೆಯ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದರು.

ಈ ಪೈಕಿ ಅನಧಿಕೃತವಾಗಿ ಸಾಗುವಳಿ ಮಾಡಿದ ಆರು ಮಂದಿಯ ಪೈಕಿ ಇಬ್ಬರು ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ್ದು, ಉಳಿದ ನಾಲ್ವರು ರೈತರ ಜಮೀನಿನ ಸುತ್ತ ಅಗಳ ಹೊಡೆಯಲಾಯಿತು. ಅರಣ್ಯಾಧಿಕಾರಿಗಳು ತೆರವು ಕಾರ್ಯಾಚರಣೆ ಕೈಗೊಂಡ ಸ್ಥಳಕ್ಕೆ ಆಗಮಿಸಿದ ಕಾಂಗ್ರೆಸ್ ಹಾಗೂ ನಮೋ ವೇದಿಕೆ ಮುಖಂಡರು ಮತ್ತು ರೈತರು ತೆರವು ಕಾರ್ಯಾಚರಣೆ ಕೈ ಬಿಡುವಂತೆ ಪಟ್ಟು ಹಿಡಿದರು. ಅಧಿಕಾರಿಗಳ ಮನವೊಲಿಸಲು ಸಾಕಷ್ಟು ಪ್ರಯತ್ನ ಪಟ್ಟರು, ಪಟ್ಟು ಬಿಡದ ಅಧಿಕಾರಿಗಳು ನ್ಯಾಯಾಲಯದ ಆದೇಶದಂತೆ ಅಕ್ರಮ ಸಾಗುವಳಿ ಮಾಡಿದ ಅರಣ್ಯ ಭೂಮಿಯನ್ನು ವಶಕ್ಕೆ ಪಡೆಯುತ್ತಿರುವುದಾಗಿ ತಿಳಿಸಿದರು.

ಕಾಂಗ್ರೆಸ್ ಮುಖಂಡ ಹೆಚ್. ಗಣಪತಿ ಹುಲ್ತಿಕೊಪ್ಪ ಮಾತನಾಡಿ, ಅಕ್ರಮ ಸಾಗುವಳಿ ಮಾಡಿದ ಬಡ ರೈತರ ಹಿತ ಕಾಯುವಲ್ಲಿ ಮತ್ತು ಬಗರ್ ಹುಕುಂ ಸಾಗುವಳಿದಾರರಿಗೆ ರಕ್ಷಣೆ ನೀಡುವಲ್ಲಿ ಸ್ಥಳೀಯ ಶಾಸಕ ಕುಮಾರ್ ಬಂಗಾರಪ್ಪ ವಿಫಲರಾಗಿದ್ದಾರೆ. ರೈತರನ್ನು ಒಕ್ಕಲೆಬ್ಬಿಸಿ ಕಣ್ಣೀರಲ್ಲಿ ಕೈತೊಳೆಯುವಂತೆ ಮಾಡಲಾಗುತ್ತಿದೆ. ಮಧು ಬಂಗಾರಪ್ಪ ಅವರು ಶಾಸಕರಾಗಿದ್ದ ಅವಧಿಯಲ್ಲಿ ಬಗರ್​ ಹುಕುಂ ರೈತರಿಗೆ ರಕ್ಷಣೆ ನೀಡಿದ್ದರು. ಮುಂದಿನ ದಿನಗಳಲ್ಲಿ ವಿವಿಧ ಹಂತದ ಹೋರಾಟವನ್ನು ಪಕ್ಷಾತೀತವಾಗಿ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

ಬಿಜೆಪಿ ಆಡಳಿತ ಇದ್ದ ಅವಧಿಯಲ್ಲೆಲ್ಲಾ ರೈತರಿಗೆ ರಕ್ಷಣೆ ಇಲ್ಲದಂತಾಗಿದೆ: ವಕೀಲ ಎಂ.ಡಿ. ಶೇಖರ್ ಮಾತನಾಡಿ, ಅರಣ್ಯ ಇಲಾಖೆಯಿಂದ ಬಗರ್​ ಹುಕುಂ ರೈತರನ್ನು ಒಕ್ಕಲೆಬ್ಬಿಸುತ್ತಿರುವುದು ಖಂಡನೀಯ. ಕ್ಷೇತ್ರದಲ್ಲಿ ಬಿಜೆಪಿ ಆಡಳಿತ ಇದ್ದ ಅವಧಿಯಲ್ಲೆಲ್ಲಾ ರೈತರಿಗೆ ರಕ್ಷಣೆ ಇಲ್ಲದಂತಾಗಿದೆ. ಈ ಹಿಂದೆಯೂ ಸಹ ರೈತರ ಬಗರ್​ ಹುಕುಂ ಸಾಗುವಳಿ ಮಾಡಿದ ಭೂಮಿಯನ್ನು ವಶಕ್ಕೆ ಪಡೆಯಲಾಗಿತ್ತು. ಸುಮಾರು 45ರಿಂದ 50 ವರ್ಷಗಳ ಹಳೆಯ ಅಡಿಕೆ ಮರಗಳು ಧರೆಗೆ ಉರುಳುವ ಆತಂಕವನ್ನು ಎದುರಿಸುವಂತಾಗಿದೆ. ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು ರೈತರಿಗೆ ಭೂಮಿ ಹಕ್ಕು ಕೊಡಿಸಲು ಮುಂದಾಗಬೇಕು ಎಂದು ಆಗ್ರಹಿಸಿದರು.

ಕಾರ್ಯಾಚರಣೆಯಲ್ಲಿ ಶಿವಮೊಗ್ಗ ಸಿಸಿಎಫ್ ಡಾ. ಕೆ.ಟಿ. ಹನುಮಂತಪ್ಪ ಮಾರ್ಗದರ್ಶನದಲ್ಲಿ ಸಾಗರ ವಿಭಾಗದ ಡಿಎಫ್‍ಒ ರಾಮಕೃಷ್ಣ, ಸೊರಬ ಎಸಿಎಫ್ ಪ್ರವೀಣ್ ಕುಮಾರ್ ಬಸ್ರೂರ್, ಹೊಸನಗರ ಎಸಿಎಫ್ ಕೆ.ಜಿ. ಪ್ರಕಾಶ್, ಸಾಗರ ಎಸಿಎಫ್ ಶ್ರೀಧರ್, ಆನವಟ್ಟಿ ಆರ್​ಎಫ್‍ಒ ಪ್ರಭುದೇವ ಪಾಟೀಲ್, ಸೊರಬ ಆರ್​ಎಫ್‍ಒ ಜಾವಿದ್ ಬಾಷಾ ಅಂಗಡಿ, ಸೇರಿದಂತೆ ಅರಣ್ಯ ಇಲಾಖೆಯ ವಿವಿಧ ವಲಯಗಳ ಆರ್​ಎಫ್‍ಒಗಳು ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು. ಕಾರ್ಯಾಚರಣೆ ಸ್ಥಳದಲ್ಲಿ ಸಿಪಿಐ ಭಾಗ್ಯವತಿ ನೇತೃತ್ವದಲ್ಲಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿತ್ತು.

ಇದನ್ನೂ ಓದಿ:ಮಲೆನಾಡ ಹೆಬ್ಬಾಗಿಲಿಗೆ ದ್ವಾರಪಾಲಕನಾರು?: ಈಶ್ವರಪ್ಪ ಸ್ಪರ್ಧೆಯೇ ಕಣ ಕುತೂಹಲ

Last Updated : Mar 20, 2023, 10:56 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.