ETV Bharat / state

ಹಥ್ರಾಸ್​ ಪ್ರಕರಣ: ಯೋಗಿ ಆದಿತ್ಯನಾಥ್​ ಸರ್ಕಾರ ವಜಾಗೊಳಿಸುವಂತೆ ಬಿಎಸ್​​ಪಿ ಆಗ್ರಹ - BSP protest against Hatras rape case

ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಆಡಳಿತ ತರಬೇಕು ಎಂದು ಆಗ್ರಹಿಸಿ ಬಹುಜನ ಸಮಾಜ ಪಾರ್ಟಿಯ ಕಾರ್ಯಕರ್ತರು ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಿದ್ರು.

bahujan samajvadi party avctivists protest in shimogha
ಶಿವಮೊಗ್ಗ
author img

By

Published : Oct 6, 2020, 11:31 AM IST

ಶಿವಮೊಗ್ಗ: ಅತ್ಯಾಚಾರ ಪ್ರಕರಣಗಳು ಮತ್ತು ಕೊಲೆ ಪ್ರಕರಣಗಳು ಹೆಚ್ಚಾಗುತ್ತಿದ್ರೂ ಅವುಗಳನ್ನು ತಡೆಗಟ್ಟುವಲ್ಲಿ ವಿಫಲವಾಗಿರುವ ಯೋಗಿ ಆದಿತ್ಯನಾಥ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಯ್ತು.

ಶಿವಮೊಗ್ಗದಲ್ಲಿ ಪ್ರತಿಭಟನೆ

ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರವು ಹೆಣ್ಣು ಮಕ್ಕಳ ಅಪಹರಣ, ಸಾಮೂಹಿಕ ಅತ್ಯಾಚಾರ, ಹಾಗೂ ಕೊಲೆ ಪ್ರಕರಣಗಳನ್ನು ನಿಯಂತ್ರಿಸುವಲ್ಲಿ ವಿಫಲವಾಗಿದೆ. ಹಾಗೂ ಸರ್ಕಾರವು ಪರೋಕ್ಷವಾಗಿ ಇಂತಹ ಘಟನೆಗಳಲ್ಲಿ ಅಪರಾಧಿಗಳಿಗೆ ರಕ್ಷಣೆ ನೀಡುತ್ತಿದೆ ಎಂಬಂತೆ ಕಂಡು ಬರುತ್ತಿದೆ ಎಂದು ದೂರಿದರು. ಹೀಗಾಗಿ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಆಡಳಿತ ತರಬೇಕು ಎಂದು ಆಗ್ರಹಿಸಿ ಬಹುಜನ ಸಮಾಜ ಪಾರ್ಟಿಯ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.

ಹಥ್ರಾಸ್​​ ಅತ್ಯಾಚಾರ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಿ ಕುಟುಂಬಕ್ಕೆ ನ್ಯಾಯ ಒದಗಿಸಿಕೊಡಬೇಕು ಎಂದು ಆಗ್ರಹಿಸಿ ಮನವಿ ಸಲ್ಲಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.