ETV Bharat / state

ಭದ್ರಾ ಡ್ಯಾಂ ಬಳಿ ತಡೆಗೋಡೆ ಕುಸಿತ: ಅಪಾಯದ ಭೀತಿ - ಕಣ್ಮುಚ್ಚಿ ಕುಳಿತ ಆಡಳಿತ - Barrier collapse near Bhadra Dam at shivamogga

ಭದ್ರಾ ಡ್ಯಾಂನಿಂದ ನೀರು ಹೊರಬಿಟ್ಟಿರುವ ಕಾರಣ ಭಾರಿ ಸಂಖ್ಯೆಯ ಪ್ರವಾಸಿಗರು ಡ್ಯಾಂ ವೀಕ್ಷಣೆಗೆ ಆಗಮಿಸುತ್ತಿದ್ದಾರೆ. ತಡೆಗೋಡೆ ಕುಸಿತವಾಗಿರುವ ಸ್ಥಳದ ಬಳಿಯೇ ಓಡಾಡುತ್ತಿದ್ದಾರೆ. ಕೊಂಚ ಹೆಚ್ಚು ಕಮ್ಮಿಯಾದರೂ ನಾಗರಿಕರು ನದಿಗೆ ಬೀಳುವ ಸಾಧ್ಯತೆಯಿದೆ.

ಭದ್ರಾ ಡ್ಯಾಂಗೆ ಭಾರಿ ಪ್ರಮಾಣದಲ್ಲಿ ಜನರು ಆಗಮಿಸುತ್ತಿರುವುದು

author img

By

Published : Jul 18, 2022, 8:02 PM IST

ಶಿವಮೊಗ್ಗ: ಜಿಲ್ಲೆಯ ಗಡಿ ಭಾಗದಲ್ಲಿರುವ ಭದ್ರಾ ಡ್ಯಾಂ ಗರಿಷ್ಠ ಮಟ್ಟ ತಲುಪಿದ್ದು, ಕಳೆದ ಹಲವು ದಿನಗಳಿಂದ ನೀರು ಹೊರ ಬಿಡಲಾಗುತ್ತಿದೆ. ಜಲರಾಶಿ ಸೊಬಗು ಕಣ್ತುಂಬಿಕೊಳ್ಳಲು ನೂರಾರು ಪ್ರವಾಸಿಗರು ಆಗಮಿಸುತ್ತಿದ್ದಾರೆ. ಆದರೆ, ನೀರಿನ ರಭಸಕ್ಕೆ ಡ್ಯಾಂ ಮುಂಭಾಗದ ತಡೆಗೋಡೆ ಕುಸಿದು ಬಿದ್ದಿದೆ.

ಭದ್ರಾ ಡ್ಯಾಂಗೆ ಭಾರಿ ಪ್ರಮಾಣದಲ್ಲಿ ಜನರು ಆಗಮಿಸುತ್ತಿರುವುದು

ದಿನದಿಂದ ದಿನಕ್ಕೆ ಭೂ ಕುಸಿತ ಹೆಚ್ಚಾಗುತ್ತಿದೆ. ಅಪಾಯಕಾರಿ ಸ್ಥಿತಿಯಲ್ಲಿದೆ. ಆದರೆ, ಇಲ್ಲಿಯವರೆಗೂ ಸೂಕ್ತ ದುರಸ್ತಿ ಕಾಮಗಾರಿಯಾಗಲಿ, ಮುನ್ನೆಚ್ಚರಿಕೆ ಕ್ರಮವಾಗಲಿ ಕೈಗೊಂಡಿಲ್ಲ. ಪೊಲೀಸ್ ಇಲಾಖೆಯ ಬ್ಯಾರಿಕೇಡ್ ಕೂಡ ಕುಸಿದು ನದಿಗೆ ಬಿದ್ದಿದೆ ಎಂದು ಪ್ರವಾಸಿಗರು ದೂರಿದ್ದಾರೆ.

ಡ್ಯಾಂನಿಂದ ನೀರು ಹೊರಬಿಟ್ಟಿರುವ ಕಾರಣದಿಂದ ಭಾರಿ ಸಂಖ್ಯೆಯ ಪ್ರವಾಸಿಗರು ಡ್ಯಾಂ ವೀಕ್ಷಣೆಗೆ ಆಗಮಿಸುತ್ತಿದ್ದಾರೆ. ತಡೆಗೋಡೆ ಕುಸಿತವಾಗಿರುವ ಸ್ಥಳದ ಬಳಿಯೇ ಓಡಾಡುತ್ತಿದ್ದಾರೆ. ಕೊಂಚ ಹೆಚ್ಚು ಕಮ್ಮಿಯಾದರೂ ನಾಗರಿಕರು ನದಿಗೆ ಬೀಳುವ ಸಾಧ್ಯತೆಯಿದೆ.

ತಕ್ಷಣವೇ ಭದ್ರಾ ಜಲಾಶಯ ಆಡಳಿತ ದುರಸ್ತಿ ಕಾರ್ಯ ನಡೆಸಬೇಕು. ಜೊತೆಗೆ ಸ್ಥಳದಲ್ಲಿ ಪ್ರವಾಸಿಗರ ಸಂಚಾರ ನಿರ್ಬಂಧಿಸಿ, ಸೂಕ್ತ ಬ್ಯಾರಿಕೇಡ್ – ಮುನ್ನೆಚ್ಚರಿಕೆ ಫಲಕ ಹಾಕಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಓದಿ: ಸಾತ್ನಾಳಿ-ಮಾಚಾಳಿ ಗ್ರಾಮದ ಸೇತುವೆ ಮುಳುಗಡೆ.. ಶಾಶ್ವತ ಪರಿಹಾರಕ್ಕೆ ಗ್ರಾಮಸ್ಥರ ಒತ್ತಾಯ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.