ETV Bharat / state

ಪ್ಯಾರಾ ಮೆಡಿಕಲ್​​​ ವಿದ್ಯಾರ್ಥಿ ವೇತನದಲ್ಲಿ ತಾರತಮ್ಯ: ಶಂಭುಗೌಡ ಆರೋಪ - ಶಿವಮೊಗ್ಗ

ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಮೂರು ವರ್ಷದಿಂದ  ಡಿಪ್ಲೋಮಾ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ನೀಡುತ್ತಿರುವ ವಿದ್ಯಾರ್ಥಿ ವೇತನದಲ್ಲಿ ತಾರತಮ್ಯ ಮಾಡಲಾಗುತ್ತಿದೆ ಎಂದು ಮಾಹಿತಿ ಹಕ್ಕು ಕಾರ್ಯಕರ್ತ ಶಂಭುಗೌಡ ಆರೋಪಿಸಿದ್ದಾರೆ.

ಪ್ಯಾರಾ ಮೆಡಿಕಲ್​ ವಿದ್ಯಾರ್ಥಿ ವೇತನದಲ್ಲಿ ತಾರತಮ್ಯ ಮಾಡಲಾಗುತ್ತಿದೆ... ಶಂಭುಗೌಡ ಆರೋಪ
author img

By

Published : Jul 14, 2019, 9:29 AM IST

ಶಿವಮೊಗ್ಗ: ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಮೂರು ವರ್ಷದಿಂದ ಡಿಪ್ಲೋಮಾ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ನೀಡುತ್ತಿರುವ ವಿದ್ಯಾರ್ಥಿ ವೇತನದಲ್ಲಿ ತಾರತಮ್ಯ ಮಾಡಲಾಗುತ್ತಿದೆ ಎಂದು ಮಾಹಿತಿ ಹಕ್ಕು ಕಾರ್ಯಕರ್ತ ಶಂಭುಗೌಡ ಆರೋಪಿಸಿದ್ದಾರೆ.

ಪ್ಯಾರಾ ಮೆಡಿಕಲ್​ ವಿದ್ಯಾರ್ಥಿ ವೇತನದಲ್ಲಿ ತಾರತಮ್ಯ: ಶಂಭುಗೌಡ ಆರೋಪ

ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ 400ರಿಂದ 500 ಪ್ಯಾರಾ ಮೆಡಿಕಲ್ ಕಾಲೇಜುಗಳಿವೆ. ಈ ಕಾಲೇಜುಗಳಲ್ಲಿ ಸರ್ಕಾರ ನಿಗದಿಪಡಿಸಿದ 9 ಪ್ಯಾರಾ ಮೆಡಿಕಲ್ ಕೋರ್ಸ್​ಗಳ ತರಬೇತಿಯನ್ನು ಮೂರು ವರ್ಷಗಳ ಕಾಲ ನೀಡಲಾಗುತ್ತದೆ. ಈ ಮೂರು ವರ್ಷದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ. ಆದರೆ ಈ ವಿದ್ಯಾರ್ಥಿ ವೇತನವನ್ನು ನೀಡುವ ಸಂದರ್ಭದಲ್ಲಿ ಸಾಕಷ್ಟು ತಾರತಮ್ಯ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಮೈಸೂರಿನಲ್ಲಿ ಪ್ರತಿ ವಿದ್ಯಾರ್ಥಿಗೆ ತಲಾ 6560 ರೂ. ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ. ಅದೇ ಕೋರ್ಸ್​ನಲ್ಲಿ ತರಬೇತಿ ಪಡೆಯುತ್ತಿರುವ ಗದಗದ ವಿದ್ಯಾರ್ಥಿಗೆ 28600 ರೂ. ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ. ಈ ತಾರತಮ್ಯದ ಬಗ್ಗೆ ವಿಚಾರಿಸಿದರೆ ಸಮಾಜ ಕಲ್ಯಾಣ ಇಲಾಖೆಯ ಯಾವ ಅಧಿಕಾರಿಗಳು ಸಮರ್ಪಕವಾದ ಉತ್ತರ ನೀಡುತ್ತಿಲ್ಲ. ಇಡೀ ರಾಜ್ಯಕ್ಕೆ ಒಂದೇ ಸಮಾಜ ಕಲ್ಯಾಣ ಇಲಾಖೆ ಕಾರ್ಯನಿರ್ವಹಿಸುತ್ತಿದೆ. ಹೀಗಿರುವಾಗ ಬೇರೆ ಬೇರೆ ಕಡೆಗಳಲ್ಲಿ ಬೇರೆ ಬೇರೆ ಮೊತ್ತದ ವಿದ್ಯಾರ್ಥಿ ವೇತನ ನೀಡಲು ಅವಕಾಶ ಇರುವುದು ಸಾಧ್ಯವಿಲ್ಲ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಿ ಅರ್ಹ ಪ್ಯಾರಾ ಮೆಡಿಕಲ್ ವಿದ್ಯಾರ್ಥಿಗಳಿಗೆ ಸಮಾನ ರೀತಿಯ ವಿದ್ಯಾರ್ಥಿ ವೇತನ ನೀಡುವಂತಾಗಬೇಕು ಎಂದು ಆಗ್ರಹಿಸಿದರು.

Intro:ಶಿವಮೊಗ್ಗ,
ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಮೂರು ವರ್ಷಗಳ ಡಿಪ್ಲೊಮಾ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಸಮಾಜಕಲ್ಯಾಣ ಇಲಾಖೆಯ ನೀಡುತ್ತಿರುವ ವಿದ್ಯಾರ್ಥಿ ವೇತನದಲ್ಲಿ ತಾರತಮ್ಯ ಮಾಡಲಾಗುತ್ತಿದೆ ಎಂದು ಮಾಹಿತಿ ಹಕ್ಕು ಕಾರ್ಯಕರ್ತ ಶಂಭುಗೌಡ ಆರೋಪಿಸಿದ್ದಾರೆ.

Body:ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ರಾಜ್ಯದಲ್ಲಿ 400ರಿಂದ 500 ಪ್ಯಾರಾಮೆಡಿಕಲ್ ಕಾಲೇಜುಗಳಿವೆ .
ಈ ಕಾಲೇಜುಗಳಲ್ಲಿ ಸರ್ಕಾರ ನಿಗದಿಪಡಿಸಿದ 9 ಪ್ಯಾರಾಮೆಡಿಕಲ್ ಕೋರ್ಸ್ ಗಳ ತರಬೇತಿಯನ್ನು ಮೂರು ವರ್ಷಗಳ ಕಾಲ ನೀಡಲಾಗುತ್ತದೆ.
ಈ ವಿದ್ಯಾರ್ಥಿಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ. ಆದರೆ ಈ ವಿದ್ಯಾರ್ಥಿವೇತನವನ್ನು ನೀಡುವ ಸಂದರ್ಭದಲ್ಲಿ ಬೇರೆಬೇರೆ ಪ್ರಮಾಣದ ವಿದ್ಯಾರ್ಥಿವೇತನವನ್ನು ನೀಡುವ ಮೂಲಕ ಅನ್ಯಾಯ ಮಾಡಲಾಗುತ್ತಿದೆ. ಹಾಗೂ ತಾರತಮ್ಯ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

Conclusion:ಮೈಸೂರಿನಲ್ಲಿ ಪ್ರತಿ ವಿದ್ಯಾರ್ಥಿಗೆ ತಲಾ 6560 ರೂ
ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ. ಅದೇ ಕೋರ್ಸ್ನಲ್ಲಿ ತರಬೇತಿ ಪಡೆಯುತ್ತಿರುವ ಗದಗದ ವಿದ್ಯಾರ್ಥಿಗೆ 28600 ರೂ ವಿದ್ಯಾರ್ಥಿವೇತನ ನೀಡಲಾಗುತ್ತಿದೆ. ಈ ತಾರತಮ್ಯದ ಬಗ್ಗೆ ವಿಚಾರಿಸಿದರೆ ಸಮಾಜಕಲ್ಯಾಣ ಇಲಾಖೆಯ ಯಾವ ಅಧಿಕಾರಿಗಳು ಸಮರ್ಪಕವಾದ ಉತ್ತರ ನೀಡುತ್ತಿಲ್ಲ ಎಂದರು.
ಇಡಿ ರಾಜ್ಯಕ್ಕೆ ಒಂದೇ ಸಮಾಜ ಕಲ್ಯಾಣ ಇಲಾಖೆ ಕಾರ್ಯನಿರ್ವಹಿಸುತ್ತಿದೆ. ಹೀಗಿರುವಾಗ ಬೇರೆ ಬೇರೆ ಕಡೆಗಳಲ್ಲಿ ಬೇರೆಬೇರೆ ಮೊತ್ತದ ವಿದ್ಯಾರ್ಥಿವೇತನ ನೀಡಲು ಅವಕಾಶ ಇರುವುದು ಸಾಧ್ಯವಿಲ್ಲ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಿ ಅರ್ಹ ಪ್ಯಾರಮೆಡಿಕಲ್ ವಿದ್ಯಾರ್ಥಿಗಳಿಗೆ ಸಮಾನ ರೀತಿಯ ವಿದ್ಯಾರ್ಥಿವೇತನ ನೀಡುವಂತಾಗಬೇಕು ಎಂದು ಆಗ್ರಹಿಸಿದರು.
ಭೀಮಾನಾಯ್ಕ ಎಸ್ ಶಿವಮೊಗ್ಗ

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.