ಶಿವಮೊಗ್ಗ : ಶಿವಮೊಗ್ಗದ ಭದ್ರಾ ಅಚ್ಚುಕಟ್ಟು ಅಭಿವೃದ್ಧಿ ಪ್ರಾಧಿಕಾರ ಈ ಹಿಂದಿನಿಂದಲೂ ತನ್ನ ವ್ಯಾಪ್ತಿಯಲ್ಲಿ ನೀರಾವರಿ ಯೋಜನೆಗಳ ನಿರ್ವಹಣೆ ಹಾಗೂ ರೈತರ ಸಮಸ್ಯೆಗಳನ್ನು ಬಗೆಹರಿಸುವ ಕೆಲಸ ಮಾಡಿಕೊಂಡು ಬರುತ್ತಿದೆ.
ಇದೀಗ ಪ್ರಾಧಿಕಾರ ಒಂದು ಹೆಜ್ಜೆ ಮುಂದೆ ಹೋಗಿ, ಪ್ರಾಧಿಕಾರದ ಅಧ್ಯಕ್ಷರು, ಅಧಿಕಾರಿಗಳು ಮತ್ತು ರೈತ ಸಮೂಹದ ನಡುವಿನ ಅಂತರವನ್ನು ಕಡಿಮೆ ಮಾಡುವ ಸಲುವಾಗಿ ಹೊಸ ಯೋಜನೆಯೊಂದನ್ನು ಆರಂಭಿಸಿದ್ದು, ನೀರಾವರಿ ನಿಗಮದ ಭದ್ರಾ ಯೋಜನಾ ವೃತ್ತ ಕಚೇರಿಯಲ್ಲಿ ಸಹಾಯವಾಣಿ ಕೇಂದ್ರ ಆರಂಭಿಸಲಾಗಿದೆ.
10 ರಿಂದ ಸಂಜೆ 5ರವರೆಗೆ ಸಹಾಯವಾಣಿ ಕಾರ್ಯನಿರ್ವಹಿಸಲಿದ್ದು, ಕೇಂದ್ರಕ್ಕೆ ಬರುವ ಕರೆಗಳನ್ನು ಸ್ವೀಕರಿಸಿ, ಸಂಬಂಧಪಟ್ಟವರಿಗೆ ತಲುಪಿಸಲು ಉದ್ದೇಶಿಸಲಾಗಿದೆ. ಜಲಾಶಯದಲ್ಲಿ ಸಾಕಷ್ಟು ಪ್ರಮಾಣದ ನೀರು ಇದ್ದಾಗಲೂ ಕೊನೆಯ ಭಾಗದ ರೈತರಿಗೆ ನೀರು ಲಭ್ಯವಾಗದೆ ತೀವ್ರ ತರಹದ ಅಡಚಣೆ ಉಂಟಾಗುತ್ತಿತ್ತು.
ಕಾಲುವೆಗಳಲ್ಲಿ ನೀರನ್ನು ಹರಿಸಿದಾಗ ಈ ಭಾಗದಲ್ಲಿ ಕಾರ್ಯನಿರ್ವಹಿಸುವ ಇಂಜಿನಿಯರ್ಗಳು ಹಾಗೂ ರೈತರ ನಡುವೆ ಸಂವಹನದ ಕೊರತೆ ಉಂಟಾಗುತ್ತಿರುವುದನ್ನು ಸರಿಪಡಿಸಲು ಇದೀಗ ಸಹಾಯವಾಣಿ ಕೇಂದ್ರ ಆರಂಭಿಸಲಾಗಿದೆ.
ಪ್ರಸ್ತುತ ರೈತರು ಮತ್ತು ಇಂಜಿನಿಯರ್ಗಳ ನಡುವೆ ಸಂಪರ್ಕ ಸೇತುವೆಯಾಗಿ ಈ ಸಹಾಯವಾಣಿ ಕಾರ್ಯನಿರ್ವಹಿಸಲಿರುವುದು ರೈತರ ಸಂತಸಕ್ಕೆ ಕಾರಣವಾಗಿದೆ.
ಇದನ್ನೂ ಓದಿ: ಶಿವಮೊಗ್ಗದಲ್ಲಿ ಡೀಸೆಲ್ ಕಳ್ಳತನ: ಖದೀಮ ಈಗ ಪೊಲೀಸರ ಅತಿಥಿ