ಶಿವಮೊಗ್ಗ: ಬೈಕ್ಗೆ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿರಾಳಕೊಪ್ಪ ಪಟ್ಟಣದಲ್ಲಿ ಜರುಗಿದೆ.
ಸೊರಬ ರಸ್ತೆಯ ನೆಹರು ಸ್ಟೇಡಿಯಂ ಬಳಿ ನಡೆದ ಅಪಘಾತದಲ್ಲಿ ಬೈಕ್ ಸವಾರ ನಿಂಗರಾಜ್ (48) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ನಿಂಗರಾಜ್ ಸೊರಬ ತಾಲೂಕು ಸುತ್ತು ಕೋಟೆಯ ನಿವಾಸಿ ಎಂದು ಗುರುತಿಸಲಾಗಿದೆ. ಅಪಘಾತ ಸಂಭವಿಸುತ್ತಿದ್ದಂತೆ ಇನ್ನೊಂದು ವಾಹನದ ಚಾಲಕ ಪರಾರಿಯಾಗಿದ್ದಾನೆ.
ಈ ಕುರಿತು ಶಿರಾಳಕೊಪ್ಪ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಪರಾರಿಯಾದ ವಾಹನ ಮತ್ತು ಚಾಲಕನಿಗಾಗಿ ಹುಡುಕಾಟ ಆರಂಭಿಸಿದ್ದಾರೆ.