ಶಿವಮೊಗ್ಗ: ಸೊರಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರತ್ಯೇಕ ರಸ್ತೆ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಸೊರಬ ತಾಲೂಕು ಹಳೆಬೈಲು, ಎನ್.ಹೊಳೆಕಟ್ಟೆ ಗ್ರಾಮಗಳ ಮಧ್ಯೆ ಖಾಸಗಿ ಬಸ್‌ವೊಂದು ಬೈಕ್ಗೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಬೈಕ್ ಸವಾರ ಕೆಳಗೆ ಬಿದ್ದಾಗ, ಆತನ ತಲೆ ಮೇಲೆ ಹರಿದ ಪರಿಣಾಮ ಬೈಕ್ ಸವಾರ ರವಿ(40) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರವಿ ಶಿಕಾರಿಪುರ ತಾಲೂಕು ಸುಣ್ಣದ ಕೊಪ್ಪ ಗ್ರಾಮದ ನಿವಾಸಿ ಎಂದು ಗುರುತಿಸಲಾಗಿದೆ.
ಇನ್ನೊಂದು ಪ್ರಕರಣದಲ್ಲಿ ಬೈಕ್ಗಳ ನಡುವೆ ನಡೆದ ಅಪಘಾತದಲ್ಲಿ ಪರಶುರಾಮಪ್ಪ(45) ಸ್ಥಳದಲ್ಲಿಯೇ ಸಾವನ್ನಪ್ಪಿದ್ರೆ, ಗಾಯಾಳು ಸೊರಬ ತಾಲೂಕು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎರಡು ಪ್ರಕರಣಗಳು ಸೊರಬ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.