ಶಿವಮೊಗ್ಗ: ಶರಾವತಿ ನದಿ ನೀರನ್ನು ಬೆಂಗಳೂರಿಗೆ ಕೊಂಡೊಯ್ಯುವ ಸರ್ಕಾರದ ಪ್ರಸ್ತಾವನೆ ವಿರೋಧಿಸಿ ಹೊಸನಗರ ಹಿತರಕ್ಷಣಾ ವೇದಿಕೆಯ ವತಿಯಿಂದ ಹೊಸನಗರದಿಂದ ಶಿವಮೊಗ್ಗದವರೆಗೆ ಬೈಕ್ ರ್ಯಾಲಿ ಮೂಲಕ ಬಂದು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ನಾಳೆ ನಡೆಯಲಿರುವ ಶಿವಮೊಗ್ಗ ಬಂದ್ಗೆ ಸ್ವಯಂಪ್ರೇರಿತರಾಗಿ ಬೆಂಬಲ ನೀಡಿ ಎಂದು ಅಭಿನವ ಚನ್ನಬಸವ ಸ್ವಾಮೀಜಿ, ಮುಳಗದ್ದೆ ಮಠ ಸ್ವಾಮೀಜಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡರು.