ಶಿವಮೊಗ್ಗ: ಲಾರಿ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸಾವಿಗೀಡಾದ ಘಟನೆ ನಗರದ ಎಂ ಆರ್ ಎಸ್ ಸರ್ಕಲ್ನಲ್ಲಿ ನಡೆದಿದೆ.
ಭದ್ರಾವತಿ ಕಡೆಯಿಂದ ವೇಗವಾಗಿ ಬರುತ್ತಿದ್ದ ಲಾರಿ, ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಎಲ್ ಬಿ ಎಸ್ ನಗರದ ನಿವಾಸಿ ಪ್ರಸಾದ್(35) ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಪ್ರಕರಣ ಜರುಗಿದ ನಂತರ ಲಾರಿ ಚಾಲಕ ಲಾರಿ ನಿಲ್ಲಿಸದೇ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾನೆ. ತಕ್ಷಣವೇ ಸ್ಥಳೀಯರು ಅವನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಈ ಸಂಬಂಧ ಪೂರ್ವ ಸಂಚಾರಿ ವಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.