ಶಿವಮೊಗ್ಗ: ಬೈಕ್ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಸಾಗರದ ಹೊಸೂರು ಗ್ರಾಮದಲ್ಲಿ ನಡೆದಿದೆ.
ಸಾಗರ ತಾಲೂಕು ಹೊಸೂರಿನ ಬಳಿ ಶಿವಮೊಗ್ಗ ಕಡೆಯಿಂದ ಬರುತ್ತಿದ್ದ ಬಸ್, ಸಾಗರದಿಂದ ಶಿವಮೊಗ್ಗ ಕಡೆ ಹೊರಟಿದ್ದ ಬೈಕ್ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಬೈಕ್ ಸವಾರ ಸ್ಥಳದಲ್ಲಿಯೇ ಬಿದ್ದು ಸಾವನ್ನಪ್ಪಿದ್ದಾನೆ.
ಮೃತ ಯುವಕ ಚಿಕ್ಕಮಗಳೂರು ಜಿಲ್ಲೆ ತರಿಕೆರೆ ಮೂಲದವನು ಎಂದು ತಿಳಿದು ಬಂದಿದೆ. ಯುವಕನ ಹೆಸರು ತಿಳಿದುಬಂದಿಲ್ಲ. ಘಟನೆ ಸಂಬಂಧ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.