ETV Bharat / state

ಶಿಕಾರಿಪುರ: ಬೈಕ್ ಕಳ್ಳನ ಬಂಧನ, 9 ಬೈಕ್ ವಶ - bike theft case in shivamogga

ಬೈಕ್ ಕದ್ದು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಶಿಕಾರಿಪುರ ಪೊಲೀಸರು ಬಂಧಿಸಿದ್ದಾರೆ.

bike-thief-arrested-in-shivamogga
ಶಿಕಾರಿಪುರ : ಬೈಕ್ ಕಳ್ಳನ ಬಂಧನ, 9 ಬೈಕ್ ವಶ
author img

By

Published : Aug 2, 2022, 11:42 AM IST

ಶಿವಮೊಗ್ಗ: ಬೈಕ್ ಕದ್ದು ಮಾರಾಟ ಮಾಡುತ್ತಿದ್ದವನನ್ನು ಶಿಕಾರಿಪುರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಜಿಲ್ಲೆಯ ಹನುಮಂತನಗರದ ರಾಜಪ್ಪ(35) ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಯಿಂದ ಸುಮಾರು 2 ಲಕ್ಷ 65 ಸಾವಿರ ರೂ ಮೌಲ್ಯದ 9 ಬೈಕ್​​​​ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಶಿಕಾರಿಪುರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ‌ ಸಂತೆ ಮಾರ್ಕೆಟ್ ಬಳಿ ನಿಲ್ಲಿಸಿದ್ದ ಬೈಕ್ ಕಳ್ಳತನವಾದ ಬಗ್ಗೆ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು ಆರೋಪಿ ರಾಜಪ್ಪ(35)ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ‌.

ಈ ವೇಳೆ ರಾಜಪ್ಪ ತಾನು ಬೈಕ್​​​ಗಳನ್ನು ಕದ್ದು ಮಾರಾಟ ಮಾಡಿರುವ ಬಗ್ಗೆ ಒಪ್ಪಿಕೊಂಡಿದ್ದಾನೆ‌. ಸದ್ಯ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಓದಿ : ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ.. ಆತ್ಮಹತ್ಯೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.