ಶಿವಮೊಗ್ಗ: ಈಶ್ವರಪ್ಪ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಮಾಡಿದ ಬೆನ್ನಲ್ಲೇ ಬಿಜೆಪಿ ಕಾರ್ಯಕರ್ತರು ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ, ಲಕ್ಷ್ಮೀ ಹೆಬ್ಬಾಳ್ಕರ್ ಭಾವಚಿತ್ರವಿರುವ ಬ್ಯಾನರ್ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈಶ್ವರಪ್ಪ ಸ್ವಕ್ಷೇತ್ರ ಶಿವಮೊಗ್ಗದಲ್ಲಿ ರಾಜೀನಾಮೆಗೆ ಭಾರಿ ವಿರೋಧ ವ್ಯಕ್ತವಾಗಿದೆ. ಇದು ಕಾಂಗ್ರೆಸ್ ಷಡ್ಯಂತ್ರವಾಗಿದೆ ಎಂದು ಬಿಜೆಪಿ ಕಾರ್ಯಕರ್ತರು ದೂರಿದರು. ಈಶ್ವರಪ್ಪನವರು ವಿರೋಧ ಪಕ್ಷಗಳಿಗೆ ನಾಚಿಕೆಯಾಗುವ ರೀತಿಯಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟರು. ಇದರಿಂದ ಕಾಂಗ್ರೆಸ್‌ನವರಿಗೆ ಛೀಮಾರಿ ಹಾಕಿದಂತಾಗಿದೆ. ಪ್ರಕರಣದ ಸೂಕ್ತ ತನಿಖೆ, ಆರೋಪ ಮುಕ್ತನಾಗಬೇಕು ಹಾಗು ಸಚಿವನಾಗಿ ಪ್ರಭಾವ ಬೀರಬಾರದು ಎಂಬ ಕಾರಣಕ್ಕೆ ಅವರು ರಾಜೀನಾಮೆ ನೀಡಿದ್ದಾರೆ ಎಂದು ಹೇಳಿದರು.