ETV Bharat / state

ಸಾಗರ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಹಾಲಪ್ಪ‌ ಹರತಾಳು

ಬಿಜೆಪಿ ಅಭ್ಯರ್ಥಿ ಹಾಲಪ್ಪ‌ ಹರತಾಳು ಅವರು ಸಾಗರದ ಮಹಾಗಣಪತಿ ದೇವಾಲಯದಲ್ಲಿ ಕುಟುಂಬ ಸಮೇತ ವಿಶೇಷ ಪೂಜೆ ಸಲ್ಲಿಸಿ ಅಪಾರ ಜನಸ್ತೋಮದೊಂದಿಗೆ ಮೆರವಣಿಗೆಯಲ್ಲಿ ಆಗಮಿಸಿ ನಾಮಪತ್ರ ಸಲ್ಲಿಸಿದರು.

author img

By

Published : Apr 15, 2023, 10:22 PM IST

BJP candidate Halappa Harthalu spoke to reporters.
ಬಿಜೆಪಿ ಅಭ್ಯರ್ಥಿ ಹಾಲಪ್ಪ ಹರತಾಳು ಸುದ್ದಿಗಾರರೊಂದಿಗೆ ಮಾತನಾಡಿದರು.

ಶಿವಮೊಗ್ಗ: ನಾನು ಈ ಬಾರಿ 24 ಸಾವಿರ ಮತಗಳ ಅಂತರದಿಂದ ಸಾಗರ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸುವುದಾಗಿ ಸಾಗರದ ಶಾಸಕ ಹಾಲಪ್ಪ ಹರತಾಳು ತಿಳಿಸಿದ್ದಾರೆ.

ಸಾಗರ ವಿಧಾನಸಭ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸಾಗರ ಪಟ್ಟಣದ ಉಪವಿಭಾಗಧಿಕಾರಿಗಳ ಕಚೇರಿಯಲ್ಲಿ ತಮ್ಮ ಪತ್ನಿ ಯಶೋಧ ಹಾಲಪ್ಪ, ಕಾಗೋಡು ತಿಮ್ಮಪ್ಪನವರ ಪುತ್ರಿ ಡಾ.ರಾಜನಂದಿನಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ. ಮೇಘರಾಜ್ ಹಾಗೂ ರಾಜೇಶ್ ಕೀಳಂಬಿ ಅವರ ಜತೆ ಸೇರಿ ನಾಮಪತ್ರ ಸಲ್ಲಿಸಿದ ನಂತರ ಮಾಧ್ಯಮದವರ ಜತೆಗೆ ಅವರು ಮಾತನಾಡಿದರು.

ದೇಶದಲ್ಲಿ‌ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ರಾಜ್ಯದಲ್ಲಿ ಬಿ ಎಸ್ ಯಡಿಯೂರಪ್ಪನವರ ನಾಯಕತ್ವದಲ್ಲಿ ಬಿಜೆಪಿ ಬೆಳೆಯುತ್ತಿದೆ. ಬಿಜೆಪಿ ಪ್ರಪಂಚದಲ್ಲಿ ಅತಿ ದೊಡ್ಡ ರಾಜಕೀಯ ಪಕ್ಷ. ಬಿಜೆಪಿ ಪಕ್ಷದಿಂದ ಸ್ಪರ್ಧಿಸುತ್ತಿರುವುದು ನನಗೆ ಖುಷಿ ತಂದಿದೆ. ನಾನು ಈ ಪಕ್ಷದ ಕಾರ್ಯಕರ್ತ ಎಂಬ ಹೆಮ್ಮೆಯೂ ಇದೆ. ನನಗೆ ಮತ್ತೊಮ್ಮೆ ಅವಕಾಶ ಕೊಟ್ಟಿದ್ದಕ್ಜೆ ಧನ್ಯವಾದಗಳು ಎಂದು ಹೇಳಿದರು.

ರೈತರ ಸಮಸ್ಯೆ ಬಗೆಹರಿಸುವೆ: ಸಾಗರ ಕ್ಷೇತ್ರದಲ್ಲಿ ಒಳ್ಳೆಯ ಆಡಳಿತ,ಅಭಿವೃದ್ಧಿ ಮಾಡಿದ್ದೇವೆ. ಅಭಿವೃದ್ಧಿಯನ್ನೂ ಮುಂದುವರಿಸುತ್ತೇವೆ. ಬಿಜೆಪಿ ಅಭ್ಯರ್ಥಿಯನ್ನೂ ಬೆಂಬಲಿಸಿ, ಆಶೀರ್ವಾದ ಮಾಡಿ. ಮೋದಿಯವರ ನಾಯಕತ್ವ, ಯಡಿಯೂಪ್ಪನವರ ನಾಯಕತ್ವ ಬಲಪಡಿಸಿ ಮತ್ತು ಬಿಜೆಪಿ ಬೆಂಬಲಿಸುವಂತೆ ಜನರ ಬಳಿ ಹೋಗುತ್ತಿದ್ದೇನೆ. ಮಲೆನಾಡಿನ ರೈತರ ಸಮಸ್ಯೆ ಇದೆ. ಶರಾವತಿ ಮುಳುಗಡೆ ರೈತರ ಸಮಸ್ಯೆ, ಬಗರ್ ​ಹುಕುಂ ಅರಣ್ಯ ಹಕ್ಕು ಕಾಯ್ದೆ, ಗೋಮಾಳ, ಅರಣ್ಯ ಸಾಗುವಳಿ ಹೀಗೆ ರೈತರ ಸಮಸ್ಯೆಗಳು ಇವೆ. ಮತ್ತೊಮ್ಮೆ ಊಳುವವನೆ ಹೊಲದೊಡೆಯ ಎಂದು ವಿಧಾನಸಭೆಯಲ್ಲಿ ಜನರ ಪರವಾಗಿ ಧ್ವನಿ ಎತ್ತುತ್ತೇನೆ ಎಂದು ಹೇಳಿದರು.

ಡಾ. ರಾಜನಂದಿನಿ ಬಿಜೆಪಿ ಸೇರ್ಪಡೆ ವಿಚಾರ: ಡಾ. ರಾಜನಂದಿನಿ ಅವರು ಪಕ್ಷಕ್ಕೆ ಬಂದಿರುವುದು ನಮಗೆ ಬಲ ಬಂದಿದೆ. ರಾಜಕೀಯ ಪಕ್ಷದ ದೊಡ್ಡ ಧುರೀಣರ ಮಗಳು, ಮೊದಲಿನಿಂದಲೂ ತಂದೆ ಜತೆ ರಾಜಕೀಯ ಮಾಡಿಕೊಂಡು ಬಂದಿದ್ದು, ವಿದ್ಯಾಸಂಸ್ಥೆಗಳನ್ನು ನಡೆಸುತ್ತಿದ್ದಾರೆ. ಈ ಬಾರಿ ಸಾಗರದಲ್ಲಿ 23 ಸಾವಿರಕ್ಕೂ ಹೆಚ್ಚು ಮತಗಳಿಂದ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಡಾ. ರಾಜನಂದಿನಿ ಅವರು ಮಾತನಾಡಿ, ಕಾಂಗ್ರೆಸ್ ಪಕ್ಷದವರು ನಮ್ಮ ತಂದೆಯವರ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದರು. ಅವರ ಮೇಲೆ ಹಲ್ಲೆ ಕೂಡ ಮಾಡಿದ್ದರು. ಅಂಥವರ ಪರ ಪ್ರಚಾರ ಮಾಡುವುದು ಹೇಗೆ ಎಂದು ಪರೋಕ್ಷವಾಗಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಕಿಡಿಕಾರಿದ ಅವರು ಇದರಿಂದ ನಾನು ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ್ದೇನೆ ಎಂದರು.

ಬಿಜೆಪಿಯಲ್ಲಿ ಮುಂದೆ ಸೂಕ್ತ ಸ್ಥಾನಮಾನ ನೀಡುವುದಾಗಿ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದು, ಆದರೆ ನಾನು ಯಾವುದೇ ನಿರೀಕ್ಷೆ ಇಟ್ಟುಕೊಂಡು ಬಂದಿಲ್ಲ. ಈ ಬಾರಿ ಸಾಗರದಲ್ಲಿ ಬಿಜೆಪಿ ಗೆಲ್ಲಿಸಲು ಸಂಪೂರ್ಣ ಪ್ರಯತ್ನ ಮಾಡ್ತೇನೆ ಎಂದು ತಿಳಿಸಿದರು. ಇದಕ್ಕೂ ಮುನ್ನ ಹಾಲಪ್ಪನವರು ಸಾಗರದ ಮಹಾಗಣಪತಿ ದೇವಾಲಯದಲ್ಲಿ ಕುಟುಂಬ ಸಮೇತ ವಿಶೇಷ ಪೂಜೆ ಸಲ್ಲಿಸಿ, ಅಪಾರ ಜನಸ್ತೋಮದೊಂದಿಗೆ ಮೆರವಣಿಗೆಯಲ್ಲಿ ಆಗಮಿಸಿ ನಾಮಪತ್ರ ಸಲ್ಲಿಸಿದರು.

ಇದನ್ನೂಓದಿ:ಶಿರಹಟ್ಟಿ ಬಿಜೆಪಿ ಅಭ್ಯರ್ಥಿಗೆ ಬಿ ಫಾರಂ ನೀಡಲು ಕಾನೂನು ತೊಡಕು: ತನಗೇ ಟಿಕೆಟ್ ಕೊಡುವಂತೆ ಹಾಲಿ ಶಾಸಕ ಪಟ್ಟು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.