ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸಾಲೆಕೊಪ್ಪ ರಾಮಚಂದ್ರ ಆಯ್ಕೆಯಾಗಿದ್ದಾರೆ.
ಕಳೆದ ಅವಧಿಯಲ್ಲಿ ಕಾಂಗ್ರೆಸ್ ಜೊತೆಗಿದ್ದ ಯಲ್ಲಪ್ಪ ಬಿಜೆಪಿಗೆ ಬೆಂಬಲಿಸಿ ಪಕ್ಷಾಂತರಗೊಂಡು ಉಪಾಧ್ಯಕ್ಷ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಈ ಮೂಲಕ ತೀರ್ಥಹಳ್ಳಿಯಲ್ಲಿ ಕಮಲ ಆಪರೇಷನ್ ಯಶಸ್ವಿಯಾಗಿದ್ದು ಅಧಿಕಾರದ ಗದ್ದುಗೆಗೆ ಏರಿದೆ.
ಇನ್ನೂ ಎಪಿಎಂಸಿ ಚುನಾವಣೆಯನ್ನು ಹಾಲಿ ಶಾಸಕ ಆರಗ ಜ್ಞಾನೇಂದ್ರ ಹಾಗೂ ಮಾಜಿ ಶಾಸಕ ಕಿಮ್ಮನೆ ರತ್ನಾಕರ್ ರವರ ನಡುವೆ ಪ್ರತಿಷ್ಠೆಯಾಗಿತ್ತು. ತೀರ್ಥಹಳ್ಳಿ ಎಪಿಎಂಸಿಯಲ್ಲಿ ಬಿಜೆಪಿ 10 ಹಾಗೂ ಕಾಂಗ್ರೆಸ್ 7 ಸದಸ್ಯ ಬಲವನ್ನು ಹೊಂದಿದೆ.
ತೀರ್ಥಹಳ್ಳಿ ಎಪಿಎಂಸಿ ಗದ್ದುಗೆ ಏರಿದ ಕಮಲ ಪಡೆ - ಶಿವಮೊಗ್ಗ ಜಿಲ್ಲಾ ಸುದ್ದಿ
ಹಾಲಿ ಶಾಸಕ ಆರಗ ಜ್ಞಾನೇಂದ್ರ ಹಾಗೂ ಮಾಜಿ ಶಾಸಕ ಕಿಮ್ಮನೆ ರತ್ನಾಕರ್ ರವರ ನಡುವಿನ ಪ್ರತಿಷ್ಠೆಯ ಕಣವಾಗಿದ್ದ ತೀರ್ಥಹಳ್ಳಿ ಎಪಿಎಂಸಿ ಅಧ್ಯಕ್ಷ ಸ್ಥಾನ ಬಿಜೆಪಿ ಪಾಲಾಗಿದೆ.