ETV Bharat / state

ಶಿವಮೊಗ್ಗ ಜಿಲ್ಲೆಗೆ ಮೂರನೇ ಬಾರಿಗೆ ಒಲಿದ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ - ಶಿಕಾರಿಪುರ ಶಾಸಕ ಬಿ ವೈ ವಿಜಯೇಂದ್ರ

B Y Vijayendra becomes Karnataka BJP president: ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ ವೈ ವಿಜಯೇಂದ್ರ ಅವರು ನೇಮಕವಾಗಿದ್ದಾರೆ. ಈ ಮೂಲಕ ಶಿವಮೊಗ್ಗ ಜಿಲ್ಲೆಗೆ ಮೂರನೇ ಬಾರಿಗೆ ಬಿಜೆಪಿ ರಾಜ್ಯಾಧ್ಯಕ್ಷರ ಪಟ್ಟ ಒಲಿದು ಬಂದಿದೆ.

vijayendra
ವಿಜಯೇಂದ್ರ
author img

By ETV Bharat Karnataka Team

Published : Nov 11, 2023, 7:31 AM IST

ಶಿವಮೊಗ್ಗ : ಜಿಲ್ಲೆಯು 1980 ರಿಂದ ಬಿಜೆಪಿಯ ಕೋಟೆಯಾಗಿ ರೂಪುಗೊಂಡಿದೆ. ಹಿಂದುತ್ವದ ಅಲೆಯಿಂದ ಇಲ್ಲಿ ಪ್ರಾಬಲ್ಯ ಹೆಚ್ಚಿದ್ದು, ಬಿಜೆಪಿಯ ಶಕ್ತಿ ಕೇಂದ್ರ ಎಂದು ಕರೆದರೆ ತಪ್ಪಾಗಲಾರದು. ಇದುವರೆಗೆ ಜಿಲ್ಲೆಯು ನಾಲ್ವರು ಮುಖ್ಯಮಂತ್ರಿಗಳನ್ನು ನೀಡಿದೆ. ಇದರಲ್ಲಿ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ನಾಲ್ಕು ಬಾರಿ ಮುಖ್ಯಮಂತ್ರಿಯಾಗಿದ್ದರು. ಜೊತೆಗೆ, ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷರಾಗಿ ಜಿಲ್ಲೆಯಿಂದ ಈವರೆಗೆ ಮೂವರು ಕಾರ್ಯನಿರ್ವಹಿಸಿದ್ದಾರೆ.

ಬಿ ಎಸ್ ಯಡಿಯೂರಪ್ಪ 1988 ಹಾಗೂ 1998 ರಲ್ಲಿ ರಾಜ್ಯಾಧ್ಯಕ್ಷರಾಗಿದ್ದರು. ಕೆ ಎಸ್ ಈಶ್ವರಪ್ಪ 1992 ರಲ್ಲಿ ಹಾಗೂ 2010 ರಲ್ಲಿ ರಾಜ್ಯಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಇದೀಗ ಶಿಕಾರಿಪುರ ಶಾಸಕ ಬಿ ವೈ ವಿಜಯೇಂದ್ರ ಅವರನ್ನು ಕೇಂದ್ರ ಬಿಜೆಪಿ ನಾಯಕರುಗಳು ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ. ಇದರಿಂದ ಜಿಲ್ಲೆಗೆ ಮೂರನೇ ರಾಜ್ಯಾಧ್ಯಕ್ಷರ ನೇಮಕವಾದಂತೆ ಆಗಿದೆ. ಮುಂದಿನ ದಿನಗಳಲ್ಲಿ ಲೋಕಸಭಾ ಚುನಾವಣೆ ಬರಲಿದ್ದು, ವಿಜಯೇಂದ್ರ ಅವರ ನಾಯಕತ್ವಕ್ಕೆ ಹೊಸ ಸವಾಲು ಆಗಲಿದೆ.

ಬಿ ವೈ ವಿಜಯೇಂದ್ರ ಮೂರು ವರ್ಷಗಳ ಹಿಂದೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಸ್ಥಾನಕ್ಕೆ ಏರಿದ್ದರು. ನಂತರ ಅವರು ತುಮಕೂರು ಜಿಲ್ಲೆಯ ಶಿರಾ ಹಾಗೂ ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಪಕ್ಷದಿಂದ ಉಸ್ತುವಾರಿ ವಹಿಸಿಕೊಂಡು ತಮ್ಮ ಸಂಘಟನಾ ಸಾಮರ್ಥ್ಯ ಪ್ರದರ್ಶಿಸಿದ್ದರು. ಅದು ಜೆಡಿಎಸ್, ಕಾಂಗ್ರೆಸ್​ನ ಭದ್ರಕೋಟೆಯಲ್ಲಿ ಅವರು ಕಮಲ ಅರಳಿಸುವಲ್ಲಿ ಯಶಸ್ವಿಯಾಗಿದ್ದರು.

ಇದನ್ನೂ ಓದಿ : ವಿಜಯೇಂದ್ರ ಕರ್ನಾಟಕ ಬಿಜೆಪಿಯ ನೂತನ ಸಾರಥಿ: ಮೋದಿ, ಶಾ, ಸಂತೋಷ್​ಗೆ ಧನ್ಯವಾದ ಹೇಳಿದ BYV​​​​​​

ಇನ್ನೊಂದೆಡೆ, ಯಡಿಯೂರಪ್ಪ ಅವರು ಚುನಾವಣಾ ರಾಜಕಾರಣದಿಂದ ನಿವೃತ್ತಿ ಹೊಂದಿದ ಬಳಿಕ ನಡೆದ ಬೆಳವಣಿಗೆಯಲ್ಲಿ ಶಿಕಾರಿಪುರ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಪಡೆದು ಗೆದ್ದು ಬಂದಿದ್ದ ವಿಜಯೇಂದ್ರ, ಈಗ ರಾಜ್ಯ ಬಿಜೆಪಿಯ ಸಂಕಷ್ಟ ಕಾಲದಲ್ಲಿ ಸಂಘಟನೆಯ ಹೊಣೆ ಪಡೆದಿದ್ದಾರೆ.

ಇದನ್ನೂ ಓದಿ : ಪುತ್ರನಿಗೆ ಬಿಜೆಪಿ ಸಾರಥ್ಯ ಕೊಡಿಸುವಲ್ಲಿ ಯಡಿಯೂರಪ್ಪ ಸಫಲ: ಯುವ ನಾಯಕತ್ವಕ್ಕೆ ಹೈಕಮಾಂಡ್ ಮಣೆ

ಒಟ್ಟಾರೆ, ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಸೋತ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ಸಾಕಷ್ಟು ಚರ್ಚೆಗಳು ಶುರುವಾಗಿದ್ದವು. ಇದರ ನಡುವೆ ಹಲವು ನಾಯಕರ ಹೆಸರುಗಳು ಮುಂಚೂಣಿಗೆ ಬಂದಿದ್ದವು. ಇದೀಗ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರು ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ. ದಕ್ಷಿಣ ಕನ್ನಡ ಸಂಸದರಾಗಿರುವ ನಳಿನ್ ಕುಮಾರ್ ಕಟೀಲ್​ ಇದುವರೆಗೆ ರಾಜ್ಯಾಧ್ಯಕ್ಷರಾಗಿದ್ದರು. ಅವರ ಅಧಿಕಾರಾವಧಿ ರಾಜ್ಯ ವಿಧಾನಸಭೆ ಚುನಾವಣೆಗೂ ಮುನ್ನವೇ ಪೂರ್ಣಗೊಂಡಿತ್ತು.

ಇದನ್ನೂ ಓದಿ : BSY ಪುತ್ರ ಎನ್ನುವ ಕಾರಣಕ್ಕೆ ಅವಕಾಶ ಸಿಗಬೇಕಿದ್ದರೆ ಬೊಮ್ಮಾಯಿ ಸಂಪುಟದಲ್ಲಿ ಇರ್ತಿದ್ದೆ: ಕಾಂಗ್ರೆಸ್​ಗೆ ವಿಜಯೇಂದ್ರ ತಿರುಗೇಟು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.