ಶಿವಮೊಗ್ಗ: ಬಿಜೆಪಿ ನೇತೃತ್ವದ ಮಹಾನಗರ ಪಾಲಿಕೆಯ 1 ವರ್ಷದ ಆಡಳಿತ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಮಹಾಪೌರ ಹಾಗೂ ಹಾಲಿ ಪಾಲಿಕೆ ಸದಸ್ಯ ನಾಗರಾಜ್ ಕಂಕಾರಿ ಆರೋಪಿಸಿದರು.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಹಾನಗರ ಪಾಲಿಕೆ ಆಡಳಿತ ಸಂಪೂರ್ಣವಾಗಿ ವಿಫಲವಾಗಿದೆ. ಜನರ ಸಮಸ್ಯೆಗಳಿಗೆ ಸ್ಪಂದಿಸಿಲ್ಲ, ಜನವಿರೋಧಿ ಆಡಳಿತ ನಡೆಸುತ್ತಿದೆ. ಬಿಜೆಪಿ ನೇತೃತ್ವದಲ್ಲಿ ಯಾವ ಅಭಿವೃದ್ಧಿಯಾಗಿಲ್ಲ. ಅನುದಾನ ಬಳಕೆಯು ಕೂಡ ಆಗಿಲ್ಲ ಮತ್ತು ಅನುದಾನದಲ್ಲಿ ತಾರತಮ್ಯ ಇದೆ. ಬಿಜೆಪಿ ಸದಸ್ಯರ ವಾರ್ಡಗಳಿಗೆ ಹೆಚ್ಚಿನ ಅನುದಾನ ನೀಡಲಾಗಿದೆ ಎಂದು ದೂರಿದರು.
ನಗರದ ವಿದ್ಯಾರ್ಥಿಗಳಿಗೆ ನಮ್ಮ ಆಡಳಿತದಲ್ಲಿ ವಿದ್ಯಾರ್ಥಿವೇತನ ನೀಡುತ್ತಿದ್ದೆವು, ಈಗ ಅದನ್ನು ನಿಲ್ಲಿಸಲಾಗಿದೆ. ಪರಿಶಿಷ್ಟ ಜಾತಿ ಹಿಂದುಳಿದ ವರ್ಗ ಮತ್ತು ವಿಕಲಚೇತನರಿಗೆ ಯೋಜನೆ ರೂಪಿಸುವಲ್ಲಿ ಯಾವುದೇ ಕ್ರಮ ಕೈಗೊಂಡಿಲ್ಲ ಜೆಡಿಎಸ್ ಮತ್ತು ಕಾಂಗ್ರೆಸ್ ಆಡಳಿತದಲ್ಲಿ. ಅನುಮೋದನೆಗೊಂಡ ಕಾಮಗಾರಿಗಳೆ ಇನ್ನೂ ನಡೆಯುತ್ತಿವೇ ಹೊರತು ಇವರ ಅಭಿವೃದ್ಧಿ ಎಲ್ಲಿದೇ ಎಂದು ಪ್ರಶ್ನಿಸಿದರು.