ಶಿವಮೊಗ್ಗ: ಜಿಲ್ಲಾ ಬಿಜೆಪಿಯಿಂದ ನಡೆಯುತ್ತಿರುವ ಸದಸ್ಯತ್ವ ಅಭಿಯಾನಕ್ಕೆ ಬಿಜೆಪಿ ಶಾಸಕ ಕೆ.ಎಸ್.ಈಶ್ವರಪ್ಪ ಚಾಲನೆ ನೀಡಿದರು.
ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಸದಸ್ಯತ್ವ ಅಭಿಯಾನ ಕಾರ್ಯಕ್ರಮದಲ್ಲಿ ಕೆ.ಎಸ್.ಈಶ್ವರಪ್ಪ ಪಾಲ್ಗೊಂಡು ದೀಪ ಬೆಳಗಿಸಿ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ನಮ್ಮ ಪಕ್ಷದ ಕಾರ್ಯಕರ್ತರು ಸದಸ್ಯತ್ವ ಅಂದ್ರೆ ದೇವರ ಕೆಲ್ಸದ ರೀತಿ ಮಾಡುತ್ತಾರೆ. ಬಿಜೆಪಿ ಪಕ್ಷ ಪ್ರಪಂಚದಲ್ಲಿಯೇ ಅತಿ ಹೆಚ್ಚು, ಅಂದ್ರೆ 10 ಕೋಟಿ ಸದಸ್ಯರನ್ನು ಹೊಂದಿರುವ ಮೊದಲ ಪಕ್ಷವಾಗಿದೆ. ಅದರಲ್ಲೂ ರಾಜ್ಯದಲ್ಲಿ 78 ಲಕ್ಷ ಸದಸ್ಯರನ್ನು ಹೊಂದಿದೆ ಎಂದರು.
ಈ ಬಾರಿ ಡಾಕ್ಟರ್ಸ್, ಇಂಜಿನಿಯರ್ಸ್ ಸೇರಿದಂತೆ ಇನ್ನೂ ಅನೇಕ ವರ್ಗದವರನ್ನು ಪಕ್ಷದ ಸದಸ್ಯರನ್ನಾಗಿ ಮಾಡಬೇಕಿದೆ. ಈ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರು ಗಮನ ಹರಿಸಬೇಕಿದೆ ಎಂದರು.
ಬಿಜೆಪಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿ ಕುಮಾರ್ ಸಿಎಂ ಕುಮಾರಸ್ವಾಮಿರವರು ರಾಜ್ಯದ ಬರ, ಕುಡಿಯುವ ನೀರಿನ ಪರಿಸ್ಥಿತಿ ನೋಡದೆ ವಿದೇಶಿ ಪ್ರವಾಸ ಮಾಡುತ್ತಿದ್ದಾರೆ ಎಂದು ಕಿಡಿ ಕಾರಿದರು. ಇನ್ನೂ ದೇವೆಗೌಡರು ಪುತ್ರ ವ್ಯಾಮೋಹಕ್ಕೆ ಬಿದ್ದು ಮನಸಿಗೆ ಬಂದಂತೆ ಹೇಳಿಕೆಗಳನ್ನು ನೀಡುತ್ತಿರುವುದು ಸರಿಯಲ್ಲ ಎಂದರು.