ETV Bharat / state

ರಾಗಿಗುಡ್ಡ ಘಟನೆ ಖಂಡಿಸಿ ಬಿಜೆಪಿ ಪ್ರತಿಭಟನಾ ಸಭೆ: ಯುಎಪಿಎ ಪ್ರಕರಣ ದಾಖಲಿಸಲು ಆಗ್ರಹ

author img

By ETV Bharat Karnataka Team

Published : Oct 12, 2023, 6:09 PM IST

Updated : Oct 12, 2023, 6:32 PM IST

ರಾಗಿಗುಡ್ಡ ಘಟನೆ ಖಂಡಿಸಿ ನಡೆದ ಪ್ರತಿಭಟನಾ ಸಭೆಯಲ್ಲಿ ಬಿಜೆಪಿ ನಾಯಕರು ಕಾಂಗ್ರೆಸ್​ ವಿರುದ್ಧ ವಾಗ್ದಾಳಿ ನಡೆಸಿದರು.

BJP protest meeting condemning Ragigudda incident
ರಾಗಿಗುಡ್ಡ ಘಟನೆ ಖಂಡಿಸಿ ಬಿಜೆಪಿ ಪ್ರತಿಭಟನಾ ಸಭೆ

ಶಿವಮೊಗ್ಗ: ನಗರದ ರಾಗಿಗುಡ್ಡ (ಶಾಂತಿನಗರ) ಬಡಾವಣೆಯಲ್ಲಿ ಅಕ್ಟೋಬರ್ 1 ರಂದು ನಡೆದ ಕಲ್ಲು ತೂರಾಟ ಘಟನೆ ಖಂಡಿಸಿ ಶಿವಮೊಗ್ಗ ಜಿಲ್ಲಾ ಬಿಜೆಪಿ ವತಿಯಿಂದ ಗುರುವಾರ ಬೃಹತ್ ಪ್ರತಿಭಟನಾ ಸಭೆ ನಡೆಸಲಾಯಿತು. ನಗರದ ಬಾಲರಾಜ್ ಅರಸ್ ರಸ್ತೆಯಲ್ಲಿ ಸಭೆ ನಡೆಯಿತು. ಬಿಜೆಪಿ ಮುಖಂಡರು ಕಾಂಗ್ರೆಸ್ ಸರ್ಕಾರ ಹಾಗೂ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ, "ತುಷ್ಟೀಕರಣ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರದ ನೀತಿ ವಿರೋಧಿಸಿ ಸಾಂಕೇತಿಕ ಪ್ರತಿಭಟನೆ ನಡೆಸಲಾಗುತ್ತಿದೆ. ಉಸ್ತುವಾರಿ ಸಚಿವರು ಸ್ಥಳಕ್ಕೆ ಹೆಸರಿಗೆ ಮಾತ್ರ ಅರ್ಧ ಗಂಟೆ ಬಂದು ಹೋದರು. ಗೃಹ ಸಚಿವರು ಇದನ್ನು ಸಣ್ಣ ಘಟನೆ ಎನ್ನುತ್ತಾರೆ. ರಾಗಿಗುಡ್ಡ ಘಟನೆಯ ನ್ಯಾಯಾಂಗ ತನಿಖೆ ಆಗಬೇಕು. ಈ ಬಗ್ಗೆ ಯುಎಪಿಎ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಬೇಕು. ಅಲ್ಲದೆ, ಈ ಕುರಿತಂತೆ ಎನ್​ಐಎ ತನಿಖೆ ನಡೆಸಬೇಕು" ಎಂದು ಆಗ್ರಹಿಸಿದರು.

"ನಿಷ್ಠಾವಂತ ಪೊಲೀಸರ ಪಟ್ಟಿ ಮಾಡಿ ಅಮಾನತು ಮಾಡಿಸುವ ಕೆಲಸ ಮಾಡಲಾಗುತ್ತಿದೆ. ಸರ್ಕಾರ ರಾಜ್ಯದಲ್ಲಿ ನಾಟಕ ಮಾಡುತ್ತಿದೆ. ರೈತರಿಗೆ ಸರಿಯಾದ ನೀರು, ವಿದ್ಯುತ್ ನೀಡಲು ವಿಫಲವಾಗಿದೆ. ರಾಗಿಗುಡ್ಡದ ಕೇಸುಗಳನ್ನು ಕೈಬಿಡಬೇಕು" ಎಂದು ರಾಘವೇಂದ್ರ ಆಗ್ರಹಿಸಿದರು.

ಇದಕ್ಕೂ ಮುನ್ನ ಮಾತನಾಡಿದ ಶಿಕಾರಿಪುರ ಶಾಸಕ ಹಾಗು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ, "ರಾಗಿಗುಡ್ಡದ ಘಟನೆಯನ್ನು ರಾಜ್ಯದ ಜನತೆ ಗಮನಿಸಿದ್ದಾರೆ. ಈ ವಿಚಾರದಲ್ಲಿ ರಾಜ್ಯ ಸರ್ಕಾರ ಹೇಗೆ ನಡೆಸಿಕೊಂಡಿದೆ ಎಂದು ಸಹ ಗಮನಿಸಿದ್ದಾರೆ. ಅಮಾಯಕರು, ಮಹಿಳೆಯರ ಮೇಲೆ ಕೈ ಮಾಡಲಾಗಿದೆ. ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಗೃಹ ಸಚಿವರು ಇದು ಸಣ್ಣ ಪುಟ್ಟ ಘಟನೆ, ಇದಕ್ಕೆ ತಲೆ ಕೆಡಿಸಿಕೊಳ್ಳಬಾರದೆನ್ನುವುದು ಎಷ್ಟು ಸರಿ" ಎಂದು ಪ್ರಶ್ನಿಸಿದರು. ಇದೇ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಕೂಡ ಕಾಂಗ್ರೆಸ್​ ವಿರುದ್ಧ ವಾಗ್ದಾಳಿ ನಡೆಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಮಾಜಿ ಶಾಸಕರಾದ ಹರತಾಳು ಹಾಲಪ್ಪ, ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್.ಅರುಣ್, ಭಾರತಿ ಶೆಟ್ಟಿ ಸೇರಿದಂತೆ ಅನೇಕರು ಹಾಜರಿದ್ದರು.

ಇದನ್ನೂ ಓದಿ : ಸ್ವಯಂಪ್ರೇರಿತವಾಗಿ ಬಿಜೆಪಿ ನಾಯಕರು ನಮ್ಮನ್ನು ಸಂಪರ್ಕಿಸುತ್ತಿದ್ದಾರೆ: ಜಗದೀಶ್ ಶೆಟ್ಟರ್

Last Updated : Oct 12, 2023, 6:32 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.