ETV Bharat / state

ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ: ಸಚಿವ ಈಶ್ವರಪ್ಪ ವಿಶ್ವಾಸ - ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ

ಶಿವಮೊಗ್ಗದಲ್ಲಿ ಮಾತನಾಡಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

Minister Eshwarappa
ಸಚಿವ ಈಶ್ವರಪ್ಪ
author img

By

Published : Oct 13, 2021, 8:18 PM IST

ಶಿವಮೊಗ್ಗ: ಹಾನಗಲ್​ ಮತ್ತು ಸಿಂದಗಿ ಎರಡು ಉಪಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಗೆಲುವು ಸಾಧಿಸಲಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗಾಗಲೇ ನಡೆದಂತಹ ಎಲ್ಲ ಉಪಚುನಾವಣೆಯಲ್ಲಿ ನಾವು ಗೆದ್ದಿದ್ದೇವೆ. ಈ ಹಿಂದೆ ನಡೆದಂತಹ ಮೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಸಹ ನಾವು ಗೆದ್ದಿದ್ದೇವೆ. ಹಾಗಾಗಿ ಉಪಚುನಾವಣೆಯಲ್ಲೂ ತಮ್ಮ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದರು.

ಬಿಜೆಪಿ ಪಕ್ಷದ ಸಂಘಟನೆ ಬೂತ್ ಮಟ್ಟದವರೆಗೂ ವ್ಯವಸ್ಥಿತವಾಗಿದೆ. ಯಾವುದೇ ಸಂದರ್ಭದಲ್ಲಿ ಚುನಾವಣೆ ಬಂದರೂ ನಾವು ಚುನಾವಣೆ ಎದುರಿಸಲು ತಯಾರಿದ್ದೇವೆ. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಹಾಗೂ ಬಸವರಾಜ್ ಬೊಮ್ಮಯಿ ರಾಜ್ಯದಲ್ಲಿ ಮಾಡಿರುವಂತಹ ಅಭಿವೃದ್ಧಿ ಕಾರ್ಯಗಳು ಹಾಗೂ ವಿಶ್ವವೇ ಮೆಚ್ಚುವಂತ ಮೋದಿಯವರ ನಾಯಕತ್ವದ ಆಧಾರದಲ್ಲಿ ನಾವು ಗೆಲ್ಲುತ್ತೇವೆ ಎಂದರು.

ಎರಡು ಉಪ ಚುನಾವಣಾ ಕ್ಷೇತ್ರಗಳಲ್ಲಿ ವ್ಯವಸ್ಥಿತವಾಗಿ ಚುನಾವಣಾ ಪ್ರಚಾರ ನಡೆಯುತ್ತಿದೆ ಎಂದು ತಿಳಿಸಿದರು.

ಇದನ್ನೂ ಓದಿ: CM ಬಸವರಾಜ ಬೊಮ್ಮಾಯಿ ಉಡುಪಿ ಪ್ರವಾಸ: ಬಂಟಕಲ್ಲು ರಸ್ತೆ ಅಭಿವೃದ್ಧಿಗೆ ಶಂಕುಸ್ಥಾಪನೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.