ETV Bharat / state

ಕೋವಿಡ್​ ಭೀತಿ ನಡುವೆಯೂ ಶಿವಮೊಗ್ಗದಲ್ಲಿ ರಕ್ತದಾನ ಶಿಬಿರ

ಕೊರೊನಾದಂತಹ ತುರ್ತು ಸಂದರ್ಭದಲ್ಲಿ ರಕ್ತದ ಕೊರತೆ ಎದುರಾಗಿದೆ. ಹಾಗಾಗಿ ಶಿವಮೊಗ್ಗದ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ಕಾರ್ಯಕರ್ತರು ರಕ್ತದಾನ ಮಾಡಲು ನಿರ್ಧರಿಸಿ, ಸುಮಾರು 30ಕ್ಕೂ ಹೆಚ್ಚು ಜನರು ರಕ್ತದಾನ ಮಾಡಿದ್ದಾರೆ.

blood donation campaign
ರಕ್ತದಾನ ಶಿಬಿರ
author img

By

Published : May 4, 2021, 12:04 PM IST

ಶಿವಮೊಗ್ಗ: ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ಕಾರ್ಯಕರ್ತರು, ರೋಟರಿ ರಕ್ತನಿಧಿಯಲ್ಲಿ ರಕ್ತದಾನ ಶಿಬಿರ ಆಯೋಜಿಸಿ ರಕ್ತದಾನ ಮಾಡಿದ್ದಾರೆ.

ಕೋವಿಡ್​​ ಎರಡನೇ ಅಲೆಗೆ ಕಡಿವಾಣ ಹಾಕುವ ಸಲುವಾಗಿ ರಾಜ್ಯದಾದ್ಯಂತ ಸರ್ಕಾರ ಜನತಾ ಕರ್ಫ್ಯೂ ಜಾರಿಗೊಳಿಸಿದೆ. ಅಗತ್ಯ ಸೇವೆ ಹಾಗೂ ಉತ್ಪಾದಕ ಕ್ಷೇತ್ರ ಬಿಟ್ಟು ಉಳಿದೆಲ್ಲಾ ಚಟುವಟಿಕೆಗಳು ಸ್ಥಗಿತಗೊಂಡಿದ್ದು, ಜನರ ಓಡಾಟಕ್ಕೂ ಸಹ ಬ್ರೇಕ್ ಬಿದ್ದಿದೆ. ಒಂದು ಕಡೆ ಸರ್ಕಾರದ ಮಾರ್ಗಸೂಚಿ ಉಲ್ಲಂಘಿಸಿದರೆ ಕಠಿಣ ಕ್ರಮದ ಭಯವಾದ್ರೆ ಮತ್ತೊಂದೆಡೆ ಸೋಂಕು ಹರಡುವ ಭೀತಿಯಿಂದಾಗಿ ಯಾರೂ ಸಹ ರಕ್ತದಾನಕ್ಕೆ ಮುಂದೆ ಬರುತ್ತಿಲ್ಲ. ಕೊರೊನಾದಂತಹ ತುರ್ತು ಸಂದರ್ಭದಲ್ಲಿ ರಕ್ತದ ಕೊರತೆ ಎದುರಾಗಿದೆ. ಈ ಹಿನ್ನೆಲೆ ರೋಟರಿ ರಕ್ತನಿಧಿಯಲ್ಲಿ ರಕ್ತದಾನ ಶಿಬಿರ ಏರ್ಪಡಿಸಲಾಗಿತ್ತು.

ರಕ್ತದಾನ ಶಿಬಿರ

ಜನತಾ ಕರ್ಫ್ಯೂ ಸಮಯದಲ್ಲಿ ತುರ್ತಾಗಿ ರಕ್ತ ಬೇಕಾದರೆ ಯಾರೂ ಸಹ ಬೇಗನೆ ಬರಲು ಸಾಧ್ಯವಾಗುವುದಿಲ್ಲ. ಈಗಾಗಲೇ ಕೋವಿಡ್ ವ್ಯಾಕ್ಸಿನ್ 45 ವರ್ಷ ಮೇಲ್ಪಟ್ಟವರಿಗೆ ನೀಡಲಾಗುತ್ತಿದೆ. ಹಾಗೂ 18 ವರ್ಷ ಮೇಲ್ಪಟ್ಟವರಿಗೂ ಸಹ ಕೋವಿಡ್ ಲಸಿಕೆ ನೀಡಲು ಸರ್ಕಾರ ತೀರ್ಮಾನ ತೆಗೆದುಕೊಂಡು ಈಗಾಗಲೇ ಪ್ರಾರಂಭಿಸಿದೆ. ಲಸಿಕೆ ಪಡೆದ ಕೆಲ ದಿನಗಳ ಕಾಲ ರಕ್ತದಾನ ಮಾಡಲು ಸಾಧ್ಯವಾಗದೇ ಇರಬಹುದು ಎಂಬ ಕಾರಣಕ್ಕೆ ಶಿವಮೊಗ್ಗದ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ಕಾರ್ಯಕರ್ತರು ರಕ್ತದಾನ ಮಾಡಲು ನಿರ್ಧರಿಸಿ, ಸುಮಾರು 30ಕ್ಕೂ ಹೆಚ್ಚು ಜನರು ರಕ್ತದಾನ ಮಾಡಿದ್ದಾರೆ.

ಇದನ್ನೂ ಓದಿ: ಚಾಮರಾಜನಗರ ಜಿಲ್ಲಾಸ್ಪತ್ರೆ ಪರಿಶೀಲಿಸುತ್ತಿರುವ ಕಳಸದ್... ಮತ್ತೊಂದೆಡೆ ವ್ಯಕ್ತಿಯಿಂದ ಏಕಾಂಗಿ ಪ್ರತಿಭಟನೆ!

ಕೋವಿಡ್​​ ಸಂಕಷ್ಟದ ಸಮಯದಲ್ಲಿ ರಕ್ತದ ಅಭಾವ ಎದುರಾಗಿರುವುದನ್ನು ಮನಗಂಡು, ರಕ್ತದಾನ ಶಿಬಿರ ಆಯೋಜಿಸಿ ರಕ್ತದಾನ ಮಾಡಿರುವ ಶಿವಮೊಗ್ಗದ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ಕಾರ್ಯ ನಿಜಕ್ಕೂ ಶ್ಲಾಘನೀಯ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.