ETV Bharat / state

ತಪ್ಪು ಮಾಡದಿದ್ದರೆ ಈ ದೊಂಬರಾಟವೇಕೆ? ಇಡಿ ನಡೆ ಪ್ರಶ್ನಿಸಿ ಬೀದಿಗಿಳಿದ ಕಾಂಗ್ರೆಸ್ ನಾಯಕರ​ ವಿರುದ್ಧ ಬಿಎಸ್​ವೈ ವಾಗ್ದಾಳಿ

ಮುಂದಿನ ಚುನಾವಣೆಯಲ್ಲಿ ನಾನು ಶಿಕಾರಿಪುರದಿಂದ ಸ್ಪರ್ಧಿಸುವುದಿಲ್ಲ. ವಿಜಯೇಂದ್ರ ಅವರೇ ಸ್ಪರ್ಧಿಸುತ್ತಾರೆ. ನನಗಿಂತ ಹೆಚ್ಚು ಅಂತರದಲ್ಲಿ ಗೆಲ್ಲಿಸಿಕೊಡಬೇಕೆಂದು ಶಿಕಾರಿಪುರದ ಜನರಲ್ಲಿ ಕೇಳಿಕೊಳ್ಳುತ್ತೇನೆ ಎಂದು ಮನವಿ ಮಾಡಿಕೊಂಡರು.

BSY slams Congress for protests agsinst ED

author img

By

Published : Jul 22, 2022, 5:02 PM IST

ಶಿವಮೊಗ್ಗ: ಇಡಿ ನಡೆಯನ್ನು ಪ್ರಶ್ನಿಸಿ ಬೀದಿಗಿಳಿದಿರುವ ಕಾಂಗ್ರೆಸ್ ನಾಯಕರ​ ವಿರುದ್ಧ ವಾಗ್ದಾಳಿ ನಡೆಸಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.​ ಯಡಿಯೂರಪ್ಪ, ಮುಂದಿನ ದಿನಮಾನಗಳಲ್ಲಿ ಭಾರತೀಯ ಜನತಾ ಪಾರ್ಟಿ ಅಧಿಕಾರಕ್ಕೆ ಬರುವುದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದು ಭವಿಷ್ಯ ನುಡಿದಿದ್ದಾರೆ.

ಅಂಜನಾಪುರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವರ ಸೋಲು ನಿಶ್ಚಿತ. ಸೋಲಿನ ಭಯದಿಂದ ಇಲ್ಲ-ಸಲ್ಲ ಕಾರಣಗಳನ್ನು ತಂದಿಡುವ ಮೂಲಕ ಪ್ರತಿಭಟನೆ ಅಂತಹ ಗಲಾಟೆ ಮಾಡುತ್ತಿದ್ದಾರೆ. ಜಾರಿ ನಿರ್ದೇಶನಾಲಯವು ತನ್ನ ಕೆಲಸವನ್ನು ತಾನು ನಿರ್ವಹಿಸುತ್ತಿದೆ. ಸೋನಿಯಾ ಗಾಂಧಿ ಆಗಲಿ ಅಥವಾ ರಾಹುಲ್​ ಗಾಂಧಿ ಆಗಲಿ ತಪ್ಪು ಮಾಡದಿದ್ದರೆ ಚಿಂತೆ ಮಾಡುವಂತಹ ಅಗತ್ಯವಿಲ್ಲ. ಇಡಿ ನೋಟಿಸ್​ ನೀಡಿದರೂ ಧರಣಿ ಮಾಡುವುದು, ಪ್ರತಿಭಟನೆ ಮಾಡುವುದು ಕಾಂಗ್ರೆಸ್​ ನಾಯಕರಿಗೆ ಶೋಭೆ ತರುವಂತಹದ್ದಲ್ಲ ಎಂದರು.

ಇದನ್ನೂ ಓದಿ: ಮುಂದಿನ ಚುನಾವಣೆಯಲ್ಲಿ ಶಿಕಾರಿಪುರದಿಂದ ವಿಜಯೇಂದ್ರ ಸ್ಪರ್ಧೆ: ಮಗನಿಗೆ ಕ್ಷೇತ್ರ ಬಿಟ್ಟುಕೊಟ್ಟ ಮಾಜಿ ಸಿಎಂ

ಅವರು ಇಂತಹ ಎಷ್ಟೇ ಸರ್ಕಸ್​ ಮಾಡಿದರೂ ಮುಂದಿನ ದಿನಮಾನಗಳಲ್ಲಿ ಭಾರತೀಯ ಜನತಾ ಪಾರ್ಟಿ ಅಧಿಕಾರಕ್ಕೆ ಬರುವುದನ್ನು ತೆಡೆಯಲು ಸಾಧ್ಯವಿಲ್ಲ. ಸ್ಪಷ್ಟ ಬಹುಮತದೊಂದಿಗೆ ನಮ್ಮ ಪಕ್ಷದವರೇ ಮುಖ್ಯಮಂತ್ರಿಯಾಗುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ.

ಕಾಂಗ್ರೆಸ್​ ನಾಯಕರು ಈಗಾಗಲೇ ಭ್ರಮೆಯಲ್ಲಿದ್ದಾರೆ. ಅದೇ ಭ್ರಮೆಯಲ್ಲಿ ನಾನು ಮುಂದಿನ ಮುಖ್ಯಮಂತ್ರಿ ಎಂದು ಹೇಳಿಕೊಂಡು ಓಡಾಡುತ್ತಿದ್ದಾರೆ. ಅವರ ವರ್ತನೆಯನ್ನು ರಾಜ್ಯದ ಜನರು ನೋಡುತ್ತಿದ್ದಾರೆ. ಅವರು ಹಾಗೆ ಕಚ್ಚಾಡುತ್ತಲೇ ಇರಲಿ. ಜನರು ಬುದ್ಧಿ ಕಲಿಸಲಿದ್ದಾರೆ ಎಂದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್.​ ಯಡಿಯೂರಪ್ಪ

ರಮೇಶ್​ ಕುಮಾರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಬಿಎಸ್​ವೈ, ಅವರ ಮಾತಿನಿಂದ ಕಾಂಗ್ರೆಸ್ ಮತ್ತೆ​ ಸಂಪೂರ್ಣ ಬೆತ್ತಲೆ ಆಗಿದೆ. ಹಣ ಮಾಡಿಕೊಂಡಿರುವ ಬಗ್ಗೆ ಅವರೇ ಸ್ಪಷ್ಟನೆ ನೀಡಿದ್ದಾರೆ. ಭ್ರಷ್ಟಾಚಾರದ ಉದಾರಹಣೆಗೆ ಇದಕ್ಕಿಂತ ಮತ್ತೊಂದು ಬೇಕಿಲ್ಲ. ಅಧಿಕಾರಿಕ್ಕೆ ಬಂದ ಬಳಿಕ ಕಾಂಗ್ರೆಸ್​ ಭ್ರಷ್ಟಾಚಾರ ಮಾಡಿದೆ. ಹಗಲು ಧರೋಡೆ ಮಾಡಿದೆ ಅನ್ನೋದಕ್ಕೆ ರಮೇಶ್​ ಕುಮಾರ್ ಹೇಳಿಕೆಯೇ ಸಾಕ್ಷಿ.

ರಾಜ್ಯದ ಜನರ ಮುಂದೆ ಇದೇ ವಿಷಯವನ್ನು ತೆಗೆದುಕೊಂಡು ಹೋಗುತ್ತೇವೆ. ಜನರು ತೀರ್ಮಾನ ಮಾಡಲಿ. ಭ್ರಷ್ಟಾಚಾರದಲ್ಲಿ ತೊಡಗಿರುವ ಸರ್ಕಾರ ಬೇಕಾ ಅಥವಾ ಪಾರದರ್ಶಕ ಆಡಳಿತ ನೀಡುವ ಸರ್ಕಾರ ಬೇಕಾ ಎಂದು ಅವರೇ ತೀರ್ಮಾನಿಸಲಿ ಎಂದು ಬಿಎಸ್​ ಯಡಿಯೂರಪ್ಪ ಹೇಳಿದರು.

ಇದೇ ವೇಳೆ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರಗೆ ಕ್ಷೇತ್ರ ಬಿಟ್ಟುಕೊಡುವುದಾಗಿ ಘೋಷಣೆ ಮಾಡಿದರು. ಈ ಮೂಲಕ ಈವರೆಗೆ ಕ್ಷೇತ್ರದ ಬಗ್ಗೆ ಇದ್ದ ಗೊಂದಲಗಳಿಗೆ ತೆರೆ ಎಳೆದರು. ಮುಂದಿನ ಚುನಾವಣೆಯಲ್ಲಿ ನಾನು ಶಿಕಾರಿಪುರದಿಂದ ಸ್ಪರ್ಧಿಸುವುದಿಲ್ಲ. ವಿಜಯೇಂದ್ರ ಅವರೇ ಸ್ಪರ್ಧಿಸುತ್ತಾರೆ. ನನಗಿಂತ ಹೆಚ್ಚು ಅಂತರದಲ್ಲಿ ಗೆಲ್ಲಿಸಿಕೊಡಬೇಕೆಂದು ಶಿಕಾರಿಪುರದ ಜನರಲ್ಲಿ ಕೇಳಿಕೊಳ್ಳುತ್ತೇನೆ ಎಂದು ಮನವಿ ಮಾಡಿಕೊಂಡರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.