ETV Bharat / state

ಹೋರಿ ಬೆದರಿಸುವ ಸ್ಪರ್ಧೆ: ಶಿವಮೊಗ್ಗದಲ್ಲಿ ಇಬ್ಬರು ಸಾವು

ಶಿವಮೊಗ್ಗ ಜಿಲ್ಲೆಯ ಎರಡು ಕಡೆ ನಡೆದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಇಬ್ಬರು ಸಾವಿಗೀಡಾಗಿದ್ದಾರೆ.

Two die in bull bullying competition
ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಎರಡು ಸಾವು
author img

By

Published : Jan 16, 2023, 2:22 PM IST

Updated : Jan 16, 2023, 4:12 PM IST

ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಇಬ್ಬರು ಸಾವು

ಶಿವಮೊಗ್ಗ: ಪ್ರತ್ಯೇಕ ಪ್ರಕರಣದಲ್ಲಿ ಹೋರಿ ಬೆದರಿಸುವ ಸ್ಪರ್ಧೆ ನೋಡಲು ಹೋದ ಇಬ್ಬರು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ಶಿವಮೊಗ್ಗ ತಾಲೂಕು ಕೊನಗನವಳ್ಳಿ ಗ್ರಾಮದಲ್ಲಿ ಭಾನುವಾರ ನಡೆದ ಹೋರಿ ಬೆದರಿಸುವ ಸ್ಪರ್ಧೆ ನೋಡಲು ಹೋದ ಶಿವಮೊಗ್ಗ ನಗರದ ಆಲ್ಕೊಳ ಬಡಾವಣೆಯ ನಿವಾಸಿ ಲೋಕೇಶ್(32) ಸಾವನ್ನಪ್ಪಿದ್ದಾರೆ. ಇನ್ನೊಂದು ಪ್ರಕರಣದಲ್ಲಿ ಶಿಕಾರಿಪುರ ತಾಲೂಕಿನ ಮಾಳೂರು ಗ್ರಾಮದಲ್ಲೂ ಹೋರಿ ಬೆದರಿಸುವ ಸ್ಪರ್ಧೆ ನೋಡಲು ಹೋದ ರಂಗನಾಥ್ (23) ವರ್ಷದ ಯುವಕ ಸಾವನ್ನಪ್ಪಿದ್ದಾನೆ.

ಕೂಲಿ ಕೆಲಸ ಮಾಡಿಕೊಂಡಿದ್ದ ಲೋಕೇಶ್ ಭಾನುವಾರ ರಜೆ ಇದ್ದ ಕಾರಣ ಕೊನಗನವಳ್ಳಿ ಗ್ರಾಮದಲ್ಲಿ ಆಯೋಜನೆಯಾಗಿದ್ದ ಹೋರಿ ಬೆದರಿಸುವ ಸ್ಪರ್ಧೆ ನೋಡಲು ಹೋಗಿದ್ದ. ಈ ವೇಳೆ ಲೋಕೇಶ್​​ಗೆ ಹೋರಿ ಎದುರುಗಡೆಯಿಂದ ಬಂದು ಎದೆಗೆ ಗುದ್ದಿದೆ. ಇದರಿಂದ ಲೋಕೇಶ್ ಸ್ಥಳದಲ್ಲಿಯೇ ಕುಸಿದು ಬಿದ್ದಿದ್ದಾರೆ‌. ತಕ್ಷಣ ಅವರನ್ನು ಆಯನೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರ ಸಲಹೆಯಂತೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದು‌ಕೊಂಡು ಬರಲಾಗಿತ್ತು. ಆದರೆ ಆಸ್ಪತ್ರೆಗೆ ಬರುವಷ್ಟರಲ್ಲಿ ಲೋಕೇಶ್ ಸಾವನ್ನಪ್ಪಿದ್ದಾರೆ.

ಕುಂಸಿ ಪೊಲೀಸ್ ಠಾಣೆಯಲ್ಲಿ ದೂರು: ಲೋಕೇಶ್​​ಗೆ ಪತ್ನಿ ಹಾಗೂ 5 ವರ್ಷ ಮತ್ತು 3 ವರ್ಷದ ಇಬ್ಬರು ಗಂಡು ಮಕ್ಕಳು ಹಾಗೂ ಒಂದೂವರೆ ವರ್ಷದ ಒಂದು ಹೆಣ್ಣು ಮಗುವಿದೆ. ಕುಟುಂಬಕ್ಕೆ ಲೋಕೇಶ್ ಅವರೇ ಆಧಾರವಾಗಿದ್ದರು. ಹೋರಿ ಬೆದರಿಸುವ ಸ್ಪರ್ಧೆ ಅಯೋಜಕರ ನಿರ್ಲಕ್ಷ್ಯದಿಂದ ದುರ್ಘಟನೆ ಸಂಭವಿಸಿದೆ ಎಂದು ಲೋಕೇಶ್ ಕುಟುಂಬಸ್ಥರು ಆರೋಪಿಸಿದ್ದಾರೆ. ಲೋಕೇಶ್ ಕುಟುಂಬಸ್ಥರ ದುಃಖ ಮುಗಿಲುಮುಟ್ಟಿದೆ. ಆಯೋಜಕರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು. ಜಿಲ್ಲಾಡಳಿತ ಇಂತಹ ಅಪಾಯಕಾರಿ ಸ್ಪರ್ಧೆಗಳಿಗೆ ಬ್ರೇಕ್ ಹಾಕಬೇಕೆಂದು ಒತ್ತಾಯಿಸಿದ್ದಾರೆ. ಮೃತ ಲೋಕೇಶ್ ಪತ್ನಿ ಚಂದ್ರಮ್ಮ ಹೋರಿ ಬೆದರಿಸುವ ಸ್ಪರ್ಧೆ ಆಯೋಜಕರ ವಿರುದ್ಧ ಕುಂಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇನ್ನೊಂದು ಪ್ರಕರಣದಲ್ಲಿ ಶಿಕಾರಿಪುರ ತಾಲೂಕಿನ ಮಾಳೂರು ಗ್ರಾಮದಲ್ಲೂ ಹೋರಿ ಬೆದರಿಸುವ ಸ್ಪರ್ಧೆ ನೋಡಲು ಹೋದ ರಂಗನಾಥ್ (23) ಎಂಬ ಯುವಕ ಸಾವನ್ನಪ್ಪಿದ್ದಾನೆ. ಈತ ಮಾಳೂರು ಗ್ರಾಮದ ನಿವಾಸಿಯಾಗಿದ್ದಾನೆ‌. ಈತ ಗ್ರಾಮದಲ್ಲಿ ಸಣ್ಣದೊಂದು ಕ್ಯಾಂಟೀನ್ ನಡೆಸುತ್ತಿದ್ದ. ಜನವರಿ 14ರಂದು ನಡೆದ ಸ್ಪರ್ಧೆ ನೋಡಲು ಹೋದಾಗ ಓಡುತ್ತಿದ್ದ ಹೋರಿಯು ರಂಗನಾಥ್​ನ ಹೊಟ್ಟೆ ಸೀಳಿಕೊಂಡು ಹೋಗಿದೆ.

ತೀವ್ರ ಗಾಯಗೊಂಡ ಯುವಕನನ್ನು ತಕ್ಷಣ ಶಿರಾಳಕೊಪ್ಪದ ಆಸ್ಪತ್ರೆಗೆ ಸೇರಿಸಿ, ಬಳಿಕ ಶಿಕಾರಿಪುರ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಇಲ್ಲಿ ಸರಿಯಾಗಿ ಚಿಕಿತ್ಸೆ ಇಲ್ಲದ ಕಾರಣ ಇವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಬಳಿಕ ಚಿಕಿತ್ಸೆಗೆ ಸ್ಪಂದಿಸದೆ ರಂಗನಾಥ್ ಸಾವನ್ನಪ್ಪಿದ್ದಾನೆ. ಈ ಕುರಿತು ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಮೃತ ರಂಗನಾಥ್​ನ ಮಾವ ಆಯೋಜಕರ ವಿರುದ್ಧ ದೂರು ದಾಖಲಿಸಿದ್ದಾರೆ.

ಜನವರಿ 15ರಂದು ಅವಕಾಶ ಮಾಡಿಕೊಡಲಾಗಿತ್ತು: ಕೊನಗನವಳ್ಳಿ ನಡೆದ ಹೋರಿ ಬೆದರಿಸುವ ಸ್ಪರ್ಧೆಗೆ ಜಿಲ್ಲಾಡಳಿತ ಅನುಮತಿ ನೀಡಿದೆ. ಅದರಂತೆ ಮಾಳೂರಿನಲ್ಲಿ ನಡೆದ ಮೊದಲನೇ ದಿನದ ಸ್ಪರ್ಧೆಗೆ ಜಿಲ್ಲಾಡಳಿತ ಅನುಮತಿ ನೀಡಿತ್ತು. ಮಾಳೂರಿನಲ್ಲಿ‌‌ ಮೊದಲ ದಿನ ನಡೆದ ಸ್ಪರ್ಧೆಗೆ ಅನುಮತಿ ಇತ್ತು. ಆದರೆ, ಅಂದಿನ ಸ್ಪರ್ಧೆಯಲ್ಲಿ ಸ್ಥಳೀಯ ಹೋರಿಗಳಿಗೆ ಅನುಮತಿ ಇಲ್ಲದ ಕಾರಣ ಜನವರಿ 15ರಂದು ಅವಕಾಶ ಮಾಡಿಕೊಡಲಾಗಿತ್ತು. ಆದರೆ, ಇದಕ್ಕೆ ಜಿಲ್ಲಾಡಳಿತದ ಅನುಮತಿ‌ ಇರಲಿಲ್ಲ. ಈ ವೇಳೆ ಅವಘಡ ನಡೆದಿದೆ ಎಂದು ತಿಳಿದುಬಂದಿದೆ.

ಕೊನಗನವಳ್ಳಿಯಲ್ಲಿ ನಡೆದ ಸ್ಪರ್ಧೆಯಲ್ಲಿ ಸುಮಾರು 8 ಜನರು ಗಾಯಗೊಂಡಿದ್ದಾರೆ. ಕೆಲವರು ಹೊರ ರೋಗಿಗಳಾಗಿ ಚಿಕಿತ್ಸೆ ಪಡೆದುಕೊಂಡು ವಾಪಸ್ ಆಗಿದ್ದಾರೆ. ಇನ್ನಿಬ್ಬರಿಗೆ ಕಣ್ಣು ಹಾಗೂ ಬೆನ್ನಿಗೆ ಗಾಯವಾಗಿದೆ. ಇವರೆಲ್ಲರೂ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಒಳ ರೋಗಿಗಳಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ‌.

ಆಸ್ಪತ್ರೆ ಶವಾಗಾರದ ಬಳಿ ಪ್ರತಿಭಟನೆ: ಅಪಾಯಕಾರಿ ಸ್ಪರ್ಧೆ ಆಯೋಜನೆ ಮಾಡಲು ಅನುಮತಿ ನೀಡಿದ ಜಿಲ್ಲಾಧಿಕಾರಿಗಳು, ಪ್ರತಿನಿಧಿಗಳು ಸ್ಥಳಕ್ಕೆ ಆಗಮಿಸಬೇಕು ಹಾಗೂ ಆಯೋಜಕರ ವಿರುದ್ದ ಕಠಿಣ ಕ್ರಮ ಜರುಗಿಸಬೇಕೆಂದು ಆಗ್ರಹಿಸಿ ಆಸ್ಪತ್ರೆ ಶವಾಗಾರದ ಬಳಿ ಲೋಕೇಶ್ ಸಂಬಂಧಿಗಳು ಪ್ರತಿಭಟನೆ ನಡೆಸಿದರು. ಈ ವೇಳೆ ಶವಗಾರದ ಬಳಿ ಬಂದ ಗ್ರಾಮಾಂತರ ಶಾಸಕ ಕೆ. ಬಿ ಅಶೋಕ ನಾಯಕ್ ಎದುರು ಆಕ್ರೋಶ ವ್ಯಕ್ತಪಡಿಸಿದರು. ನಂತರ ಮಾತನಾಡಿದ ಶಾಸಕ‌ ಕೆ. ಬಿ ಅಶೋಕ ನಾಯ್ಕ, ಇಂತಹ ದುರ್ಘಟನೆ ನಡೆಯಬಾರದಿತ್ತು, ನಡೆದಿದೆ. ಮೃತರ ಮನೆಯವರ ದುಃಖದಲ್ಲಿ‌ ನಾನು ಭಾಗಿಯಾಗುತ್ತೇನೆ. ಅವರ ಕುಟುಂಬಕ್ಕೆ ಸೂಕ್ತ ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ನೀಡಿದರು.

ಹೋರಿ ಹಿಡಿಯುವ ಅಪಾಯಕಾರಿ ಸ್ಪರ್ಧೆಯನ್ನು ನಿಷೇಧಿಸಬೇಕು. ಇಂತಹ ಅಪಾಯಕಾರಿ ಕ್ರೀಡೆಯಿಂದ ಸಾವು ನೋವು ಉಂಟಾಗುತ್ತಿದೆ. ಇದರಿಂದ ಇಂತಹ ಕ್ರೀಡೆಗೆ ಅವಕಾಶ ನೀಡಬಾರದು. ಇದರಿಂದ ಜಿಲ್ಲೆಯಲ್ಲಿ‌ ಹೋರಿ ಬೆದರಿಸುವ ಸ್ಪರ್ಧೆಗೆ ಅವಕಾಶ ನೀಡಬಾರದು‌ ಎಂದು‌‌ ಲೋಕೇಶ್​​​ ಪಕ್ಕದ ಮನೆ‌ ನಿವಾಸಿ ಕೃಷ್ಣಪ್ಪ ಆಗ್ರಹಿಸಿದ್ದಾರೆ.

ಇದನ್ನೂ ಓದಿ:ಹಾವೇರಿಯಲ್ಲಿ ಹೋರಿ ಬೆದರಿಸುವ ಸ್ಫರ್ಧೆ.. ಯುವಕನ ಸಾವು

Last Updated : Jan 16, 2023, 4:12 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.