ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ರಸ್ತೆ ಪಕ್ಕದ ದಿಬ್ಬಕ್ಕೆ ಡಿಕ್ಕಿ ಹೊಡೆದಿದ್ದು, ಬಸ್ನಲ್ಲಿದ್ದ 20 ಕ್ಕೂ ಹೆಚ್ಚು ಜನರಿಗೆ ಸಣ್ಣ ಪುಟ್ಟ ಗಾಯಗಳಾಗಿರುವ ಘಟನೆ ಹೊಸನಗರ ತಾಲೂಕು ನಿಟ್ಟೂರು ಬಳಿ ನಡೆದಿದೆ.
ಖಾಸಗಿ ಬಸ್ ಹೊಸನಗರದ ಕಡೆಯಿಂದ ಭಟ್ಕಳ ಕಡೆ ಹೊರಟಿತ್ತು. ಈ ವೇಳೆ ನಿಟ್ಟೂರು ಬಳಿಯ ಇಳಿಜಾರು ಪ್ರದೇಶದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ದಿಬ್ಬಕ್ಕೆ ಡಿಕ್ಕಿ ಹೊಡೆದಿದೆ. ಇದರಿಂದ ಬಸ್ನ ಮುಂಭಾಗ ಜಖಂ ಗೊಂಡಿದೆ. ಜೊತೆಗೆ ಬಸ್ ಹಿಂದೆ ಬರುತ್ತಿದ್ದ ಪೆಟ್ರೋಲಿಯಂ ಲಾರಿ ಕೂಡ ಬಸ್ಗೆ ಡಿಕ್ಕಿ ಹೊಡೆದಿದೆ.
ಸದ್ಯ ಈ ಘಟನೆಯಿಂದ ಯಾವುದೇ ಅನಾಹುತ ಸಂಭವಿಸಿಲ್ಲ. ಬಸ್ನಲ್ಲಿದ್ದ ಪ್ರಯಾಣಿಕರನ್ನು ಬೇರೆ ಬಸ್ಗೆ ಕಳುಹಿಸಿಕೊಡಲಾಗಿದೆ.