ETV Bharat / state

ಪ್ರವಾಸಕ್ಕೆ ತೆರಳಿದ್ದ ಶಾಲಾ ಬಸ್ ಮರಕ್ಕೆ ಡಿಕ್ಕಿ, ಶಿಕ್ಷಕ ಸಾವು

ಶಾಲೆಯಿಂದ ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ಬಸ್ ವಿದ್ಯಾರ್ಥಿಗಳನ್ನು ಮನೆಗೆ ಬಿಟ್ಟು‌ ವಾಪಸ್ ಬರುವಾಗ ಮರಕ್ಕೆ ಡಿಕ್ಕಿ ಹೊಡೆದು ದೈಹಿಕ‌ ಶಿಕ್ಷಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಭದ್ರಾವತಿ ತಾಲೂಕು ಅರಬಿಳಚಿ ಬಳಿ ನಡೆದಿದೆ.

author img

By

Published : Dec 25, 2019, 10:21 AM IST

Bus accident in Shimoga teacherdeath
ಬಸ್ ಮರಕ್ಕೆ ಡಿಕ್ಕಿ

ಶಿವಮೊಗ್ಗ: ಶಾಲೆಯಿಂದ ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ಬಸ್ ವಿದ್ಯಾರ್ಥಿಗಳನ್ನು ಮನೆಗೆ ಬಿಟ್ಟು‌ ವಾಪಸ್ ಬರುವಾಗ ಮರಕ್ಕೆ ಡಿಕ್ಕಿ ಹೊಡೆದು ದೈಹಿಕ‌ ಶಿಕ್ಷಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಭದ್ರಾವತಿ ತಾಲೂಕು ಅರಬಿಳಚಿ ಬಳಿ ನಡೆದಿದೆ.

ಭದ್ರಾವತಿ ತಾಲೂಕು ಮಾರಶೆಟ್ಟಿಹಳ್ಳಿ ಗ್ರಾಮದ ಮಂಜುನಾಥ ಪ್ರೌಢಶಾಲೆಯ 30 ವಿದ್ಯಾರ್ಥಿಗಳು ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದರು. ಡಿ.24ರ ರಾತ್ರಿ ಪ್ರವಾಸ ಮುಗಿಸಿ ವಾಪಸ್​ ಬಂದಿದ್ದರು. ಮಾರಶೆಟ್ಟಿಹಳ್ಳಿಯಲ್ಲಿ ಕೆಲ ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಿ, ಉಳಿದ ಇಬ್ಬರು ವಿದ್ಯಾರ್ಥಿಗಳನ್ನು ಅರಬಿಳಚಿ ಗ್ರಾಮದಲ್ಲಿ ಇಳಿಸಿ ವಾಪಸ್ ಬರುವಾಗ ಅರಬಿಳಚಿ ಮತ್ತು ಕಲ್ಲಿಹಾಳ್ ರಸ್ತೆ ಮಧ್ಯೆ ಬಸ್​ ಮರಕ್ಕೆ ಡಿಕ್ಕಿ ಹೊಡೆದಿದೆ.

ಬಸ್ ಮರಕ್ಕೆ ಡಿಕ್ಕಿ, Bus accident in Shimoga teacherdeath
ಬಸ್ ಮರಕ್ಕೆ ಡಿಕ್ಕಿ

ಪರಿಣಾಮ ಬಸ್​ನಲ್ಲಿದ್ದ ಶಾಲೆಯ ದೈಹಿಕ ಶಿಕ್ಷಕ ಹರಿಕೃಷ್ಣ (45) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಸ್ ಅಪಘಾತವಾಗುತ್ತಿದ್ದಂತೆ ಚಾಲಕ ಹಾಗೂ ನಿರ್ವಾಹಕ ಸ್ಥಳದಿಂದ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಹೊಳೆಹೊನ್ನೂರು ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Intro:ಪ್ರವಾಸಕ್ಕೆ ತೆರಳಿದ್ದ ಶಾಲಾ ಬಸ್ ಮರಕ್ಕೆ ಡಿಕ್ಕಿ: ಶಿಕ್ಷಕ ಸಾವು.

ಶಿವಮೊಗ್ಗ: ಶಾಲೆಯಿಂದ ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ಬಸ್ ವಿದ್ಯಾರ್ಥಿಗಳನ್ನು ಮನೆಗೆ ಬಿಟ್ಟು‌ ವಾಪಸ್ ಆಗುವಾಗ ಬಸ್ ಮರಕ್ಕೆ ಡಿಕ್ಕಿ ಹೊಡೆದು ಶಾಲೆಯ ದೈಹಿಕ‌ ಶಿಕ್ಷಕನೊರ್ವ ಸ್ಥಳದಲ್ಲಿಯೇ ಧಾರುಣ ಸಾವು ಕಂಡಿರುವ ಘಟನೆ ಭದ್ರಾವತಿ ತಾಲೂಕು ಅರಬಿಳಚಿ ಬಳಿ ನಡೆದಿದೆ. ಭದ್ರಾವತಿ ತಾಲೂಕು ಮಾರಶೆಟ್ಟಿಹಳ್ಳಿ ಗ್ರಾಮದ ಮಂಜುನಾಥ ಪ್ರೌಢಶಾಲೆಯ 30 ವಿದ್ಯಾರ್ಥಿಗಳು ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದರು. ನಿನ್ನೆ ರಾತ್ರಿ ಪ್ರವಾಸ ಮುಗಿಸಿ ವಾಸಪ್ ಬರಲಾಗಿತ್ತು. Body: ನಿನ್ನೆ ರಾತ್ರಿ ಪ್ರವಾಸ ಮುಗಿಸಿ ವಾಸಪ್ ಬರಲಾಗಿತ್ತು. ಮಾರಶೆಟ್ಟಿಹಳ್ಳಿಯಲ್ಲಿ ಕೆಲ ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಿ, ಉಳಿದ ಇಬ್ಬರು ವಿದ್ಯಾರ್ಥಿಗಳನ್ನು ಅರಬಿಳಚಿ ಗ್ರಾಮಕ್ಕೆ ಇಳಿಸಿ ವಾಪಸ್ ಆಗುವಾಗ ಬಸ್ ಅರಬಿಳಚಿ ಹಾಗೂ ಕಲ್ಲಿಹಾಳ್ ರಸ್ತೆ ಮಧ್ಯೆ ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಬಸ್ ನಲ್ಲಿದ್ದ ಶಾಲೆಯ ದೈಹಿಕ ಶಿಕ್ಷಕ. ಹರಿಕೃಷ್ಣ(45) ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.Conclusion:ಬಸ್ ಅಪಘಾತವಾಗುತ್ತಿದ್ದಂತೆಯೇ ಬಸ್ ಚಾಲಕ ಹಾಗೂ ನಿರ್ವಾಹಕ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಹೊಳೆಹೊನ್ನೂರು ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಕೇಸು ದಾಖಲಿಸಿ ಕೊಂಡಿದ್ದಾರೆ.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.