ಶಿವಮೊಗ್ಗ: ದೆಹಲಿಯಲ್ಲಿ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ಅವರನ್ನು ಸಂಸದ ಬಿ.ವೈ.ರಾಘವೇಂದ್ರ ಭೇಟಿ ಮಾಡಿ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಮನವಿ ಸಲ್ಲಿಸಿದ್ದಾರೆ.
ಸಂಸದರ ಮನವಿಗೆ ಸಚಿವರು ಸ್ಪಂದಿಸಿ, ಮುಂದಿನ ವಾರ ಅಧಿಕಾರಿಗಳ ತಾಂತ್ರಿಕ ತಂಡ ಶಿವಮೊಗ್ಗಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲಿಸಲಿದೆ ಎಂದು ತಿಳಿಸಿದ್ದಾರೆ. ಅಲ್ಲದೇ ವಿಮಾನ ನಿಲ್ದಾಣದ ಕಾಮಗಾರಿಯನ್ನು ಚುರುಕುಗೊಳಿಸಿ, ವಿಮಾನಯಾನ ಸೇವೆಗೆ ಮುಕ್ತ ಅವಕಾಶ ಕಲ್ಪಿಸಿಕೊಡುವ ಭರವಸೆಯನ್ನು ಈ ವೇಳೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಕೇಂದ್ರ ರೈಲ್ವೆ ರಾಜ್ಯ ಸಚಿವ ಸುರೇಶ್ ಅಂಗಡಿ ಉಪಸ್ಥಿತರಿದ್ದರು.