ಶಿವಮೊಗ್ಗ: ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ನೂತನ ಗ್ರಾಮ ಪಂಚಾಯತಿ ಚುನಾವಣಾ ನಿರ್ವಹಣಾ ಕೇಂದ್ರವನ್ನು ಸಂಸದ ಬಿ.ವೈ. ರಾಘವೇಂದ್ರ ಉದ್ಘಾಟಿಸಿದರು.
ಗ್ರಾಮ ಪಂಚಾಯತಿ ಚುನಾವಣೆ ಹತ್ತಿರ ಬರುತ್ತಿದ್ದಂತೆ ಪಕ್ಷವನ್ನು ಸಂಘಟಿಸಲು ಬಿಜೆಪಿ ಪಕ್ಷ ತಯಾರಾಗಿದೆ. ಹಾಗಾಗಿ ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಗ್ರಾಮ ಪಂಚಾಯತಿ ಚುನಾವಣಾ ನಿರ್ವಹಣಾ ಕೇಂದ್ರವನ್ನು ಪ್ರಾರಂಭಿಸಿದ್ದು ಇಂದು ಸಂಸದ ಬಿ.ವೈ. ರಾಘವೇಂದ್ರ ಉದ್ಘಾಟಿಸಿದರು.
ಗ್ರಾಮ ಪಂಚಾಯಿತಿಗಳಲ್ಲಿ ಇರುವ ಸದಸ್ಯರು ಹಾಗೂ ಅವರ ಮಾಹಿತಿ ಕ್ಷೇತ್ರಗಳ ಸಂಖ್ಯೆಗಳು ಸೇರಿದಂತೆ ಎಲ್ಲಾ ಮಾಹಿತಿಗಳನ್ನು ಪಡೆದುಕೊಂಡು ಪಕ್ಷವನ್ನು ಸಂಘಟಿಸುವ ಕೆಲಸವನ್ನು ಬಿಜೆಪಿ ಸೋಶಿಯಲ್ ಮಿಡಿಯಾ ಟೀಂ ಈ ಕೇಂದ್ರದಲ್ಲಿ ಕೆಲಸ ನಿರ್ವಹಿಸಲಿದೆ. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ ಮೇಘರಾಜ್, ಆರ್ಯ ವೈಶ್ಯ ನಿಗಮ ಮಂಡಳಿ ಅಧ್ಯಕ್ಷ ಡಿ.ಎಸ್. ಅರುಣ್ ಸೇರಿದಂತೆ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.