ಶಿವಮೊಗ್ಗ: ಸಿಎಂ ಬಿ.ಎಸ್. ಯಡಿಯೂರಪ್ಪ ಕೊರೊನಾದಿಂದ ಬೇಗ ಗುಣಮುಖರಾಗಲಿ ಎಂದು ಸಂಸದ ಬಿ.ವೈ.ರಾಘವೇಂದ್ರ ಶಿಕಾರಿಪುರದ ಹುಚ್ಚರಾಯ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆ ಸಿಎಂ ಬಿಎಸ್ವೈ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು, ಶೀಘ್ರ ಗುಣಮುಖರಾಗಲಿ ಎಂದು ಸಂಸದ ರಾಘವೇಂದ್ರ ಆರಾಧ್ಯ ದೈವ ಹುಚ್ಚರಾಯನಿಗೆ ಪೂಜೆ ಸಲ್ಲಿಸಿದರು.
ಈ ವೇಳೆ, ಯಡಿಯೂರಪ್ಪ ಬೇಗ ಗುಣಮುಖರಾಗಿ ಮತ್ತೆ ನಾಡಿನ ಜನರ ಸೇವೆಗೆ ಸಿದ್ಧರಾಗಲಿ ಎಂದು ಪ್ರಾರ್ಥಿಸಲಾಯಿತು. ಈ ಸಂದರ್ಭದಲ್ಲಿ ಯಡಿಯೂರಪ್ಪ ಅಭಿಮಾನಿಗಳು ಹಾಜರಿದ್ದರು.