ಶಿವಮೊಗ್ಗ: ಪಶುವೈದ್ಯೆ ಮೇಲಿನ ಅತ್ಯಾಚಾರ ಹಾಗೂ ಕೊಲೆ ಖಂಡಿಸಿ ಕ್ಯಾಂಪಸ್ ಫ್ರಂಟ್ ಆಪ್ ಇಂಡಿಯಾ ಸಂಘಟನೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿತು.
ಇತ್ತೀಚಿನ ದಿನಗಳಲ್ಲಿ ಇಂತಹ ಕೃತ್ಯಗಳು ಹೆಚ್ಚುತ್ತಿದೆ. ಹಾಗಾಗಿ, ಸರ್ಕಾರಗಳು ಮಹಿಳೆಯರ ಸುರಕ್ಷತೆ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು. ಈ ಕೃತ್ಯ ಎಸಗಿದವರನ್ನು ನೇಣಿಗೆ ಹಾಕಬೇಕು. ದೇಶದಲ್ಲಿ ಮಹಿಳಾ ದೌರ್ಜನ್ಯ ಪ್ರಕರಣಗಳಿಗೆ ಬಲಿಷ್ಠ ಕಾನೂನು ಜಾರಿಗೆ ತರಬೇಕು. ಇಂತಹ ಪ್ರಕರಣಗಳು ಮತ್ತೆ ಮರುಕರಳಿಸದಂತೆ ಈ ಕೃತ್ಯ ಎಸೆಗಿದವರಿಗೆ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದರು.