ಶಿವಮೊಗ್ಗ: ಅಪಘಾತದಲ್ಲಿ ಗಾಯಗೊಂಡವರನ್ನು ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ತಮ್ಮ ಬೆಂಬಲಿಗರ ಸಹಾಯದಿಂದ ಆಸ್ಪತ್ರೆಗೆ ರವಾನೆ ಮಾಡಿದರು. ಈ ವಿಡಿಯೋ ಈಗ ವೈರಲ್ ಆಗಿದೆ.
ತೀರ್ಥಹಳ್ಳಿ ತಾಲೂಕು ದೇವಂಗಿ ಗ್ರಾಮದ ಬಳಿ ಶಾಸಕರು ತೆರಳುತ್ತಿರುವ ವೇಳೆ ಎರಡು ಕಾರುಗಳ ನಡುವೆ ಡಿಕ್ಕಿ ಸಂಭವಿಸಿತ್ತು. ಈ ಅಪಘಾತದಲ್ಲಿ ಎಂಟು ಮಂದಿ ಗಾಯಗೊಂಡಿದ್ದರು, ತಕ್ಷಣ ಶಾಸಕರು ಕಾರು ನಿಲ್ಲಿಸಿ, ಗಾಯಳುಗಳನ್ನು ತೀರ್ಥಹಳ್ಳಿ ತಾಲೂಕು ಆಸ್ಪತ್ರೆಗೆ ರವಾನೆ ಮಾಡಿದರು.
ತೀವ್ರ ಅಸ್ವಸ್ಥರಾದ ಇಬ್ಬರನ್ನು ತೀರ್ಥಹಳ್ಳಿಯಿಂದ ಮಣಿಪಾಲದ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಶಾಸಕರು ತಮ್ಮ ಬೆಂಬಲಿಗರ ಸಹಾಯದಿಂದ ಗಾಯಳುಗಳನ್ನು ಆಸ್ಪತ್ರೆಗೆ ಕಳುಹಿಸಿದ್ದಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.