ಶಿವಮೊಗ್ಗ: ಚಲಿಸುತ್ತಿದ್ದ ಕಾರೊಂದು ಹೊತ್ತಿ ಉರಿದ ಘಟನೆ ಸಾಗರ ಸಮೀಪ ಬಳಸಗೋಡಿನಲ್ಲಿ ನಡೆದಿದೆ.
ಗುರುವಾರ ಬೆಳಗ್ಗೆ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಶಿವಮೊಗ್ಗದಿಂದ ಸಾಗರ ಕಡೆಗೆ ಹೊರಟಿದ್ದ, ಟಾಟಾ ಇಂಡಿಗೋ ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ. ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎನ್ನಲಾಗುತ್ತಿದೆ. ಇದುವರೆಗೂ ಕಾರ್ ಮಾಲೀಕರು ಯಾರು ಎಂಬ ಮಾಹಿತಿ ತಿಳಿದುಬಂದಿಲ್ಲ. ಸಾಗರ ಗ್ರಾಮಾಂತರ ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ.