ಶಿವಮೊಗ್ಗ: ಮರಕ್ಕೆ ಕಾರು ಡಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡು ಸುಟ್ಟು ಕರಕಲಾಗಿರುವ ಘಟನೆ ನಗರದ ಸಕ್ರೆಬೈಲು ಸಮೀಪ ಸಂಭವಿಸಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ.
ತೀರ್ಥಹಳ್ಳಿ ಕಡೆಯಿಂದ ಶಿವಮೊಗ್ಗಕ್ಕೆ ಬರುತ್ತಿರುವಾಗ ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಸಕ್ರೆಬೈಲು ಬಳಿ ಮರಕ್ಕೆ ಡಿಕ್ಕಿಯಾಗಿ ಕಾರಿಗೆ ಬೆಂಕಿ ಹೊತ್ತುಕೊಂಡಿದೆ. ಕಾರಿನಲ್ಲಿದ್ದ ಮೂವರನ್ನು ರಕ್ಷಣೆ ಮಾಡಲಾಗಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ. ಅವರನ್ನು ಕೂಡಲೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.
ಈ ಸಂಬಂಧ ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.